ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊರತಂದಿರುವ 'ಸಿಹಿಮೊಗೆ ಮಾಧ್ಯಮ' ಸ್ಮರಣ ಸಂಚಿಕೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ ಅರುಣ್ ಭದ್ರಾವತಿ ಹಳೇನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಬಿಡಗಡೆಗೊಳಿಸಿದರು.
ಭದ್ರಾವತಿ, ಮೇ. ೧೦: ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊರತಂದಿರುವ 'ಸಿಹಿಮೊಗೆ ಮಾಧ್ಯಮ' ಸ್ಮರಣ ಸಂಚಿಕೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ ಅರುಣ್ ಬಿಡಗಡೆಗೊಳಿಸಿದರು.
ಹಳೇನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸಂಚಿಕೆ ಬಿಡುಗಡೆಗೊಳಿಸಿ ಸರ್ವ ಸದಸ್ಯರ ಸಭೆಗೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಸವರಾಜ್ ವಾರ್ಷಿಕ ವರದಿ ಹಾಗು ಖಜಾಂಚಿ ಅನಂತಕುಮಾರ್ ಲೆಕ್ಕಪತ್ರ ವರದಿ ಮಂಡಿಸಿದರು.
ಕಟ್ಟಡ ಸಮಿತಿ ಅಧ್ಯಕ್ಷ ಕಣ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಪಿಲೋಮಿನಾ ನಿರೂಪಿಸಿದರು. ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್ ಸ್ವಾಗತಿಸಿದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ಸೋಮನಾಥ್, ಸದಸ್ಯ ಗಂಗಾನಾಯ್ಕ ಗೊಂದಿ ಉಪಸ್ಥಿತರಿದ್ದರು.
ಹಿರಿಯ ಸದಸ್ಯರಾದ ಎನ್. ಬಾಬು, ಶಿವಶಂಕರ್, ಬದರಿನಾರಾಯಣ, ಸುಭಾಷ್‌ರಾವ್ ಸಿಂಧ್ಯಾ, ಸುದರ್ಶನ್, ಟಿ.ಎಸ್ ಆನಂದಕುಮಾರ್, ಸಯ್ಯದ್ ಖಾನ್, ಕೆ.ಆರ್ ಶಂಕರ್, ಪ್ರಶಾಂತ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment