ಭದ್ರಾವತಿ ಸಿದ್ಧಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು. ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಭದ್ರಾವತಿ, ಮೇ. ೧೧: ಸಿದ್ಧಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು.
ಶ್ರೀ ಶ್ರೀನಿವಾಸ ಕಲ್ಯಾಣ ಸಮಿತಿ ಹಾಗೂ ಶ್ರೀ ಸಂಕರ್ಷಣ ಧರ್ಮ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಕಲ್ಯಾಣೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವೆಂಕಟೇಶ್ವರಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ದಾವಣಗೆರೆಯ ಪಂಡಿತ ವೆಂಕಟೇಶಾಚಾರ್ಯ ಮಣ್ಣೂರು ಅವರಿಂದ ಶ್ರೀನಿವಾಸ ಸ್ವಾಮಿಯ ಕುರಿತು ಉಪನ್ಯಾಸ ನಡೆಸಿಕೊಟ್ಟರು. ನಂತರ ಸ್ವಾಮಿಯ ಕಲ್ಯಾಣೋತ್ಸವ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
ಶಾಸಕ ಬಿ.ಕೆ.ಸಂಗಮೆಶ್ವರ್ ಸೇರಿದಂತೆ ಸಿದ್ದರೂಢನಗರ, ಕನಕನಗರ, ಹಳೇನಗರ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಪಂಡಿತ ಗೊಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿಆಚಾರ್, ಅರ್ಚಕರಾದ ಜಗನ್ನಾಥ, ವೆಂಕಟೇಶ್, ಸಮಿತಿ ಅಧ್ಯಕ್ಷ ಕಲ್ಲಾಪುರಾಮಚಂದ್ರ, ಜಯತೀರ್ಥ, ರಾಘವೇಂದ್ರ, ವಾಸುದೇವಮೂರ್ತಿ, ರಮಾಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment