ಭದ್ರಾವತಿ, ಮೇ. 26: ನಗರಸಭೆ ವಾರ್ಡ್ ನಂ.3ರ ಚಾಮೇಗೌಡ ಏರಿಯಾದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಸ್ಥಾನವನ್ನು ಎಲ್ಲರ ಸಹಕಾರದೊಂದಿಗೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಸಿದ್ಧವಿದ್ದು ಅಗತ್ಯವಿರುವ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ವಾರ್ಡ್ ನಗರಸಭಾ ಸದಸ್ಯ ಜಾರ್ಜ್, ಶಿಲ್ಪಿ ಜಯರಾಂ, ಕೃಷ್ಣಮೂರ್ತಿ , ಪುಟ್ಟಸ್ವಾಮಿ, ಗೋವಿಂದಪ್ಪ , ಶ್ರೀನಿವಾಸ ನಾಯ್ಡು, ಮಹಾದೇವಯ್ಯ, ಮಾಣಿಕ್ಯಂ, ಮಹಾದೇವ, ಉಮೇಶ, ಕೃಷ್ಣ, ತಿಮ್ಮಯ್ಯ, ವೆಂಕಟೇಶ್ ಮತ್ತು ಅರ್ಚಕರಾದ ಷಣ್ಮುಗಂ, ರಾಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು . ದೇವಸ್ಥಾನ ಗೋಪುರವನ್ನು ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
No comments:
Post a Comment