ಜೆ.ಸಿ ರಾಜಮ್ಮ
ಭದ್ರಾವತಿ, ಮೇ. ೨೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕ ಸಂಘದ ಮೊದಲ ಮಹಿಳಾ ಅಧ್ಯಕ್ಷರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್) ನಿವಾಸಿ ಜೆ.ಸಿ ರಾಜಮ್ಮ(೮೭) ಗುರುವಾರ ನಿಧನ ಹೊಂದಿದರು.
೫ ಜನ ಸಹೋದರಿಯರು ಮತ್ತು ೬ ಜನ ಸಹೋದರರು ಇದ್ದರು. ರಾಜಮ್ಮ ನಗರದ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿದ್ದು, ಕಾರ್ಮಿಕ ಸಂಘಕ್ಕೆ ಆಯ್ಕೆಯಾಗಿ ಪದಾಧಿಕಾರಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ಅವಧಿಯಲ್ಲಿ ಕಾರ್ಮಿಕರಿಗೆ ಬರಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು. ಇವರ ಅಂತ್ಯಕ್ರಿಯೆ ಸಂಜೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಇವರ ನಿಧನಕ್ಕೆ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಎನ್ ಬಾಲಕೃಷ್ಣ, ಜೆ.ಎನ್ ಚಂದ್ರಹಾಸ, ಎಸ್. ನರಸಿಂಹಚಾರ್, ಪ್ರಸ್ತುತ ಕಾರ್ಮಿಕ ಸಂಘದ ಅಧ್ಯಕ್ಷರಾಗಿರುವ ಜೆ. ಜಗದೀಶ್ ಹಾಗು ಪದಾಧಿಕಾರಿಗಳು, ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಲಿಂಗಯ್ಯ, ಪದಾಧಿಕಾರಿಗಳಾದ ಹನುಮಂತರಾವ್, ಶಂಕರ್, ಮಹೇಶಪ್ಪ, ಬಸವರಾಜ್, ಜಯರಾಜ್, ಕೆಂಪಯ್ಯ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ರಮಕಾಂತ್ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
I know JC Rajamma since a long time.She was a dynamic lady, who always takes a strong decision bravelly.
ReplyDeletePray, Let the Nobel Soul always rest in Peace.
K M Satheesh