Wednesday, May 11, 2022

ನಗರ, ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದು ಬಡ ಜನರ ಆರೋಗ್ಯ ರಕ್ಷಿಸಿ

ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮನವಿ


ದೇಶದ ಎಲ್ಲೆಡೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ಬಡ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕೆಂದು ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಭದ್ರಾವತಿ, ಮೇ. ೧೧: ದೇಶದ ಎಲ್ಲೆಡೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ಬಡ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕೆಂದು ಕರ್ನಾಟಕ ಜನತಾದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರು  ಹೆಚ್ಚು ಅನಾರೋಗ್ಯಗಳಿಗೆ ತುತ್ತಾಗುತ್ತಿದ್ದು, ಅದರಲ್ಲೂ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ, ಕಿಡ್ನಿ ವೈಫಲ್ಯ, ಬಾಯಿ, ಗಂಟಲು ಹಾಗು ಗರ್ಭಕೋಶದ ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಾಣಾಂತಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರುಗಳ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಿಂದ ಚಿಕಿತ್ಸೆಯಿಂದ ವಂಚಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ನೀಡಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ.
    ಸರ್ಕಾರ ಗ್ರಾಮೀಣ ಭಾಗದಲ್ಲಿ ಕನಿಷ್ಠ ಪ್ರತಿ ಎರಡು ಗ್ರಾಮ ಪಂಚಾಯತಿಗೆ ಒಂದರಂತೆ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ  ಹಾಗು ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಠ ಪ್ರತಿ ಎರಡು ವಾರ್ಡ್‌ಗಳಿಗೆ ಒಂದರಂತೆ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ ತೆರೆಯುವ ಮೂಲಕ ತಜ್ಞ ವೈದ್ಯರು, ಸಿಬ್ಬಂದಿಗಳನ್ನು ನೇಮಕಗೊಳಿಸಿ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಹಾಗು ಹೆಚ್ಚು ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆರೋಗ್ಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಮನವಿ ಮಾಡಿದ್ದಾರೆ.
    ರೈತ ಮುಖಂಡ ಕಾಳಿಂಗನಹಳ್ಳಿ ಶೇಖರ್, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಹಿರಿಯ ಮುಖಂಡ ನಾಗಾನಾಯ್ಕ, ಸಾಮಾಜಿಕ ಹೋರಾಟಗಾರ ಉಕ್ಕುಂದ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment