ಭದ್ರಾವತಿಯಲ್ಲಿ ಸೋಮವಾರ ಸಂಜೆ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೀರ ಸಾವರ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರವೀಣ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಮೇ. ೩೦: ದೇಶದ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ವೀರ ಸಾವರ್ಕರ್ ಹೆಸರನ್ನು ಬಿಟ್ಟರೇ ಆ ಪಟ್ಟಿ ಪೂರ್ಣಗೊಳ್ಳುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರವೀಣ್ ಹೇಳಿದರು.
ಅವರು ಸೋಮವಾರ ಸಂಜೆ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೀರ ಸಾವರ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಅವರ ಪಾತ್ರ ಬಹಳ ಮುಖ್ಯವಾಗಿದ್ದು, ಪ್ಲೇಗ್ ಮಾಹಾಮಾರಿ ಕಾಣಿಸಿಕೊಂಡ ಸಂದರ್ಭದಲ್ಲಿ ಬ್ರಿಟಿಷರ ವರ್ತನೆ ವಿರುದ್ದ ಸಿಡಿದೆದ್ದವರನ್ನು ದೇಶ ದ್ರೋಹದ ಆರೋಪದ ಮೇಲೆ ಗಲ್ಲಿಗೇರಿಸಿದ ಘಟನೆ ಸಾವರ್ಕರ್ ಅವರು ಬ್ರಿಟಿಷರ ವಿರುದ್ಧ ಹೋರಾಟ ನಡೆಸಲು ಕಾರಣವಾಯಿತು. ಕ್ರಾಂತಿಕಾರಕ ಹೋರಾಟದ ಮೂಲಕ ಯುವಕರನ್ನು ಸಂಘಟಿಸುವಲ್ಲಿ ಯಶಸ್ವಿಯಾದರು. ದೇಶದ ಹೊರಗು ಸಂಘಟನೆಯನ್ನು ರೂಪಿಸಿ ಆ ಮೂಲಕ ದೇಶದಿಂದ ಬ್ರಿಟಿಷರನ್ನು ತೊಲಗಿಸಲು ನಡೆಸಿದ ಹೋರಾಟ ಮಹತ್ವದ್ದಾಗಿದೆ. ಸಾವರ್ಕರ್ ಅವರ ದೇಶ ಭಕ್ತಿ, ಹೋರಾಟದ ಗುಣಗಳು ಇಂದಿನ ಪೀಳಿಗೆಯವರಿಗೆ ಅವಶ್ಯಕವಾಗಿವೆ ಎಂದರು.
ಇದಕ್ಕೂ ಸಾವರ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಹಿಂದೂ ಜಾಗರಣ ವೇದಿಕೆ ಹಾಗು ಹಿಂದೂಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
No comments:
Post a Comment