ಭದ್ರಾವತಿ ನಗರದ ಉದ್ಯಮಿ, ಸಮಾಜ ಸೇವಕ ಮಾರುತಿ ಮೆಡಿಕಲ್ ಆನಂದ್‌ರವರು ಆಮ್ ಆದ್ಮಿ ಪಾರ್ಟಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಭದ್ರಾವತಿ, ಮೇ. ೧೨: ನಗರದ ಉದ್ಯಮಿ, ಸಮಾಜ ಸೇವಕ ಮಾರುತಿ ಮೆಡಿಕಲ್ ಆನಂದ್‌ರವರು ಆಮ್ ಆದ್ಮಿ ಪಾರ್ಟಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ಹಾಗು ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಸಮ್ಮುಖದಲ್ಲಿ ಆನಂದ್ ಎಎಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಆನಂದ್‌ರವರು ಈ ಹಿಂದೆ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಸ್ಪರ್ಧೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ಎಎಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ಮುಂದಾಗಿದ್ದಾರೆ.
ಕಳೆದ ಸುಮಾರು ೨ ವರ್ಷಗಳ ಹಿಂದೆ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ತಾಲೂಕಿನ ಸುಮಾರು ೧೦ ಸಾವಿರ ಕಡು ಬಡವರಿಗೆ ಉಚಿತವಾಗಿ ದಿನಸಿ ಸಾಮಾಗ್ರಿಗಳನ್ನು ವಿತರಿಸಿದ್ದರು.
ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರಮುಖರಾದ ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ಎ. ಮಸ್ತಾನ್, ಜೋಸೆಫ್, ರಮೇಶ್, ರೇಷ್ಮಬಾನು, ಜಾವಿದ್, ಎನ್.ಪಿ ಜೋಸೆಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment