ಮಳಿಗೆಗಳ ಮಾಲೀಕರ ಸಂಕಷ್ಟಕ್ಕೆ ಸ್ಪಂದಿಸಿದ ಯುವ ಮುಖಂಡ ಬಿ.ಎಸ್ ಗಣೇಶ್
ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಏರುಪೇರು ಉಂಟಾಗುತ್ತಿದ್ದು, ಮಳಿಗೆಗಳ ಮಾಲೀಕರ ಸಮಸ್ಯೆಗೆ ಸ್ಪಂದಿಸಿರುವ ಯುವ ಮುಖಂಡ ಬಿ.ಎಸ್ ಗಣೇಶ್ ನಿಲ್ದಾಣದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಭದ್ರಾವತಿ, ಮೇ. ೨೦: ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರು ಉಂಟಾಗುತ್ತಿದ್ದು, ಇದರಿಂದಾಗಿ ನಿಲ್ದಾಣದಲ್ಲಿರುವ ಮಳಿಗೆಗಳಲ್ಲಿ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿ ನಷ್ಟ ಉಂಟಾಗಿರುವ ಘಟನೆ ನಡೆದಿದೆ.
ನಿಲ್ದಾಣದಲ್ಲಿ ವಿದ್ಯುತ್ ಅಸಮರ್ಪಕವಾಗಿ ಸಂಪರ್ಕಗೊಂಡಿರುವ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಇದರಿಂದಾಗಿ ಜೆರಾಕ್ಸ್, ಪ್ರಿಂಟರ್, ಲ್ಯಾಪ್‌ಟಾಪ್, ಫ್ರಿಡ್ಜ್, ಕಂಪ್ಯೂಟರ್, ಮಾನಿಟರ್, ಯು.ಪಿ.ಯು, ಮೊಬೈಲ್ ಚಾರ್ಜರ್ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿ ಲಕ್ಷ ರು. ನಷ್ಟ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಟ್ಟಡಕ್ಕೂ ಪ್ರವಹಿಸುತ್ತಿದ್ದು, ಇದರಿಂದಾಗಿ ಮಳಿಗೆಗಳ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ.
ಮಳಿಗೆಗಳ ಮಾಲೀಕರ ಸಮಸ್ಯೆಗೆ ಸ್ಪಂದಿಸಿರುವ ಯುವ ಮುಖಂಡ ಬಿ.ಎಸ್ ಗಣೇಶ್ ನಿಲ್ದಾಣದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಒಡೆಯರ್, ಸುರೇಶ್‌ಬಾಬು, ಶ್ರೀನಿವಾಸ್, ರಾಮಚಂದ್ರ ಮತ್ತು ಫಾರೂಕ್ ಅವರೊಂದಿಗೆ ಸುಮಾರು ೨ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಳಿಗೆಗಳ ಮಾಲೀಕರು ತಮ್ಮ ಅಳಲನ್ನು ತೋರ್ಪಡಿಸಿಕೊಂಡಿದ್ದಾರೆ. ಬಿಪಿಎಲ್ ಸಂಘದ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿ ಸುನಿಲ್ ಕುಮಾರ್, ಮೀನುಗಾರರ ಸಂಘದ ಅಧ್ಯಕ್ಷ ಮುರುಗನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment