ಭದ್ರಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವ ಸದಸ್ಯರ ಸಭೆ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಮೇ. ೨೧: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವ ಸದಸ್ಯರ ಸಭೆ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸರ್ಕಾರಿ ನೌಕರರ ಬಹುತೇಕ ಬೇಡಿಕೆಗಳನ್ನು ಈಡೇರಿಸಿಕೊಡುವಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ಶ್ರಮ ಹೆಚ್ಚಿನದ್ದಾಗಿದ್ದು, ಅದರಲ್ಲೂ ರಾಜ್ಯಾಧ್ಯಕ್ಷರು ಶಿವಮೊಗ್ಗ ಜಿಲ್ಲೆಯವರೇ ಆಗಿರುವ ಕಾರಣ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ನೆಮ್ಮದಿ ಕಾಣುವಂತಾಗಿದೆ. ಮುಂದಿನ ದಿನಗಳಲ್ಲಿ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಿಕೊಡುವ ವಿಶ್ವಾಸ ಹೊಂದಿದ್ದಾರೆ. ತಾಲೂಕಿನಲ್ಲಿ ನೌಕರರು ಇನ್ನೂ ಹೆಚ್ಚಿನ ರೀತಿಯಲ್ಲಿ ಕ್ರಿಯಾಶೀಲರಾಗುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಮನವಿ ಮಾಡಿದರು.
ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸನ್ಮಾನ ಹಾಗು ಬಹುಮಾನ ವಿತರಣೆ ನೆರವೇರಿಸಿದರು. ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ ಕೃಷ್ಣಮೂರ್ತಿ, ಪ್ರಸೂತಿ ತಜ್ಞೆ ಡಾ. ವೀಣಾ ಭಟ್, ತಹಸೀಲ್ದಾರ್ ಆರ್. ಪ್ರದೀಪ್, ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್, ಗ್ರಂಥಾಲಯ ಇಲಾಖೆಯ ರಾಜ್‌ಕುಮಾರ್, ಹಿರಿಯ ವೈದ್ಯ ಡಾ. ಶಿವಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಡಿ.ಎಸ್ ರಾಜಪ್ಪ ಸ್ವಾಗತಿಸಿದರು. ರಾಜ್ಯ ಪರಿಷತ್ ಸದಸ್ಯ ಎಸ್. ಪ್ರಕಾಶ್ ನಿರೂಪಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.
No comments:
Post a Comment