Wednesday, May 4, 2022

ಮೇ.೫ರಂದು ಕಸಾಪ ೧೦೮ನೇ ಸಂಸ್ಥಾಪನಾ ದಿನಾಚರಣೆ : ದತ್ತಿ ಕಾರ್ಯಕ್ರಮ

    ಭದ್ರಾವತಿ, ಮೇ. ೪: ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ೧೦೮ನೇ ಸಂಸ್ಥಾಪನಾ ದಿನಾಚರಣೆ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಮೇ.೫ರಂದು ಸಂಜೆ ೫ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ಎವಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಹರಿಣಾಕ್ಷಿ ಉಪನ್ಯಾಸ ನೀಡಲಿದ್ದಾರೆ.
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಕಸಾಪ ಹೊಳೆಹೊನ್ನೂರು ಹೋಬಳಿ ಘಟಕದ ಅಧ್ಯಕ್ಷ ಎಸ್.ಬಿ ಸಿದ್ದಪ್ಪ, ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಎಚ್.ಬಿ ಸಿದ್ದೋಜಿರಾವ್, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ದತ್ತಿದಾನಿಗಳಾದ ಡಾ. ವಿಜಯದೇವಿ, ಎನ್. ಶ್ರೀನಿವಾಸ್, ಡಾ. ಜಿ.ಎಂ ನಟರಾಜ್, ಜೀವಂದರ್ ಕುಮಾರ್ ಹೋತಪೇಟಿ, ಪ್ರಭಾಕರ ಬೀರಯ್ಯ, ಕರೀಗೌಡ್ರ ನಾಗರಾಜಪ್ಪ ಆರುಂಡಿ ಮತ್ತು ವಾಗೀಶ್ ಕೋಠಿ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.
    ದತ್ತಿ ನಿಧಿ ಕಾರ್ಯಕ್ರಮ:
    ಸಂಜೆ ೫.೩೦ಕ್ಕೆ ನಡೆಯಲಿರುವ ದಿವಂಗತ ಶಿವಲಿಂಗಮ್ಮ ಮತ್ತು ಡಾ. ಜಿ.ಎಂ ಮುರುಗೇಂದ್ರಯ್ಯ ದತ್ತಿ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ನ್ಯಾಯ ಕುರಿತು ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಉಪನ್ಯಾಸ ನೀಡಲಿದ್ದಾರೆ. ಅಂಧರ ಕೇಂದ್ರದ ಕಲಾವಿದರಿಂದ ಸುಗಮ ಸಂಗೀತ ನಡೆಯಲಿದ್ದು, ನಂತರ ಎಸ್. ಮನೋಜ್ ದತ್ತಿ ಕಾರ್ಯಕ್ರಮ ನಡೆಯಲಿದೆ. ಕಸಾಪ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ದತ್ತಿ ದಾನಿಗಳಾದ ಡಾ. ಜಿ.ಎಂ ನಟರಾಜ್, ಎನ್. ಶ್ರೀನಿವಾಸ್ ಉಪಸ್ಥಿತರಿರುವರು.

No comments:

Post a Comment