ಭದ್ರಾವತಿ, ಮೇ. ೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೇ.೩ರಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಕೆ.ಸಿ ನಾರಾಯಣಗೌಡ, ಅರಗಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೌರಾಯುಕ್ತ ಕೆ. ಪರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರೂಪಾಕ್ಷಪ್ಪ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮಕ್ಕೂ ಮೊದಲು ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಸಭಾಭವನದವರೆಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರದೊಂದಿಗೆ ವಿವಿಧ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.
No comments:
Post a Comment