Tuesday, May 3, 2022

ಶ್ರೀ ಹಳದಮ್ಮ ದೇವಿ ‘ಊರ ಹಬ್ಬ’ಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ೩೩ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ 'ಊರ ಹಬ್ಬ'ಕ್ಕೆ ಮಂಗಳವಾರ ರಾತ್ರಿ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿ ಮಾತನಾಡಿದರು.
    ಭದ್ರಾವತಿ, ಮೇ. ೩: ಹಳೇನಗರದ ಪುರಾಣ ಪ್ರಸಿದ್ದ ೩೩ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ 'ಊರ ಹಬ್ಬ'ಕ್ಕೆ ಮಂಗಳವಾರ ರಾತ್ರಿ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಹಳದಮ್ಮ ದೇವಿ ಎಲ್ಲರಿಗೂ ಒಳಿತು ಮಾಡುವಂತೆ ಪ್ರಾರ್ಥಿಸುತ್ತೇನೆ. ದೇವಿ ದರ್ಶನಕ್ಕೆ ಅವಕಾಶ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ದೇವಸ್ಥಾನ ಮತ್ತಷ್ಟು ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಎಸ್. ದತ್ತಾತ್ರಿ, ನಗರಸಭಾ ಸದಸ್ಯರಾದ ಆರ್. ಶ್ರೇಯಸ್, ಶಶಿಕಲಾ, ಅನುಪಮಾ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಬಿ.ಎಂ ಸಂತೋಷ್, ಪ್ರಮುಖರಾದ ಕೆ. ಮಂಜುನಾಥ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಿರೀಶ್, ಬಿ.ಎಸ್ ಗಣೇಶ್, ರಾಜಶೇಖರ್ ಉಪ್ಪಾರ, ಗೋಪಿ, ಬಿ.ಎಸ್ ಬಸವೇಶ್ ಹಾಗು ದೇವಸ್ಥಾನ ಸೇವಾ ಸಮಿತಿ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಜಾತ್ರಾ ಮಹೋತ್ಸವ ೬ ದಿನಗಳ ಕಾಲ ನಡೆಯಲಿದೆ. ಮೊದಲ ದಿನವೇ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಮಹಿಳೆಯರಿಂದ ಡೊಳ್ಳು ಕುಣಿತ ಸೇರಿದಂತೆ ಇನ್ನಿತರ ಕಲಾತಂಡಗಳು ಪಾಲ್ಗೊಂಡಿದ್ದವು. ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು.

No comments:

Post a Comment