ಭದ್ರಾವತಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೇಂಗಿ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಮೇ. ೧೮: ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೇಂಗಿ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಚಾಲನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಜನಗರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನ ನೀಡುವ ಮೂಲಕ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾಹಿತಿ ನೀಡಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಆರೋಗ್ಯ ಸಹಾಯಕರಾದ ರೇವತಿ, ಆನಂದಮೂರ್ತಿ, ಶಿವಮೊಗ್ಗ ಎನ್‌ವಿಬಿಡಿಸಿಪಿ ಮೇಲ್ವಿಚಾರಕರು, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಿಬ್ಬಂದಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment