ಭದ್ರಾವತಿ ವಿದ್ಯಾಮಂದಿರ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಮಕ್ಕಳ ದಂತ ತಪಸಣಾ ಶಿಬಿರ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಿಸಿದರು.
ಭದ್ರಾವತಿ, ಜೂ. ೧೮: ಶಿಕ್ಷಣ ಎಂದರೆ ಕೇವಲ ಮಕ್ಕಳು, ಶಿಕ್ಷಕರು ಹಾಗು ಪೋಷಕರ ನಡುವಿನ ಸಂಬಂಧವಲ್ಲ. ಶಿಕ್ಷಣ ಸಮಾಜದ ಎಲ್ಲರನ್ನು ಒಳಗೊಂಡಿದೆ ಎಂಬುದನ್ನು ಕೆಲವು ಸಂಘ-ಸಂಸ್ಥೆಗಳ ಮಾದರಿ ಕಾರ್ಯಗಳಿಂದ ತಿಳಿದು ಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
ಅವರು ಶನಿವಾರ ವಿದ್ಯಾಮಂದಿರ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಮಕ್ಕಳ ದಂತ ತಪಸಣಾ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳ ಶಿಕ್ಷಣಕ್ಕೆ ನೆರವಾಗಿ ಉಚಿತವಾಗಿ ನೋಟ್ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಸಮಾಜಕ್ಕೆ ಮಾದರಿ ಕಾರ್ಯವಾಗಿದೆ. ಮಕ್ಕಳು ನೋಟ್ ಪುಸ್ತಕ ಹಾಗು ಲೇಖನ ಸಾಮಗ್ರಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಯುವ ಮುಖಂಡ ಗಣೇಶ್ ಮಾತನಾಡಿ, ಟ್ರಸ್ಟ್ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರ ಶ್ರಮ ಹೆಚ್ಚಿನದ್ದಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯಗಳು ಇನ್ನೂ ಹೆಚ್ಚಾಗಿ ನಡೆಯುವಂತಾಗಲಿ ಎಂದರು.
ಸುಬ್ಬಯ್ಯ ಡೆಂಟಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಸಲಾಯಿತು.
ಟ್ರಸ್ಟ್ ಅಧ್ಯಕ್ಷ ಲಾಜರ್, ಉಪಾಧ್ಯಕ್ಷ ರಾಮಪ್ಪ ವಿ. ಮುನೇನಕೊಪ್ಪ, ಪ್ರಧಾನ ಕಾರ್ಯದರ್ಶಿ, ನಗರಸಭಾ ಸದಸ್ಯ್ ಕಾಂತರಾಜ್, ಸಹ ಕಾರ್ಯದರ್ಶಿ ಎಚ್.ಪಿ ಶ್ರೀನಿವಾಸ್, ಕೋಶಾಧ್ಯಕ್ಷ ಮಹೇಶ್ವರಪ್ಪ, ನಿರ್ದೇಶಕರಾದ ವಿ.ಎಚ್ ಶಿವಣ್ಣ, ಎಸ್.ಎಚ್ ಹನುಮಂತರಾವ್, ಎಲ್. ಬಸವರಾಜಪ್ಪ, ಡಿ. ಸುಬ್ರಮಣಿ, ನಾಗರಾಜ್, ಆರ್. ಕಾಮಾಕ್ಷಿ, ಎನ್. ರೂಪ, ವಿಲ್ಸನ್ ಬಾಬು ಮತ್ತು ಕೆ. ಆಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment