ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಕೃತಜ್ಞತೆ
೨೫ನೇ ಕೆರೆ ಬೌಂಡರಿ ನಿಗದಿಪಡಿಸುವ ಕಾರ್ಯ ಭದ್ರಾವತಿ ನಗರಸಭೆ ವ್ಯಾಪ್ತಿಯ ಗೋಲ್ಡನ್ ಜ್ಯೂಬಿಲಿ ಕಾಲೋನಿ ಸಮೀಪವಿರುವ ಹುತ್ತಾ ಸರ್ವೇ ನಂ.೪೮ರ ಸರ್ಕಾರಿ ಕೆರೆಯಲ್ಲಿ ನಡೆದಿದ್ದು, ಈ ಕರೆ ೮ ಎಕರೆ ೩೬ ಗುಂಟೆ ವಿಸ್ತೀರ್ಣ ಹೊಂದಿದೆ. ನಗರಸಭೆ ಸದಸ್ಯರಾದ ಲತಾ ಚಂದ್ರಶೇಖರ್ ಹಾಗು ಆರ್. ಮೋಹನ್‌ಕುಮಾರ್ ಸ್ಥಳದಲ್ಲಿಯೇ ಉಪಸ್ಥಿತರಿದ್ದು, ಬೌಂಡರಿ ನಿಗದಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ
ಭದ್ರಾವತಿ, ಜೂ. ೨೩ : ಅಂತರ್ಜಲ ಹೆಚ್ಚಿಸಿ ದನಗಾಹಿಗಳಿಗೆ, ಪ್ರಾಣಿಪಕ್ಷಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸಿ ಕೊಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಸುಮಾರು ೭೦ ಕೆರೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ ೨೫ ಕೆರೆಗಳ ಬೌಂಡರಿ ನಿಗದಿಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಹಾಗು ನಗರಸಭೆ ಆಡಳಿತಕ್ಕೆ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.
ಕೆರೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವೇದಿಕೆ ವತಿಯಿಂದ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಈ ಹೋರಾಟಕ್ಕೆ ಇದೀಗ ಪ್ರತಿಫಲ ಲಭಿಸುತ್ತಿದೆ. ಸುಮಾರು ೭೦ ಕೆರೆಗಳ ಬೌಂಡರಿ ನಿಗದಿಪಡಿಸಲು ಆದೇಶವಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ೨೫ನೇ ಕೆರೆ ಬೌಂಡರಿ ನಿಗದಿಪಡಿಸುವ ಕಾರ್ಯ ನಗರಸಭೆ ವ್ಯಾಪ್ತಿಯ ಗೋಲ್ಡನ್ ಜ್ಯೂಬಿಲಿ ಕಾಲೋನಿ ಸಮೀಪವಿರುವ ಹುತ್ತಾ ಸರ್ವೇ ನಂ.೪೮ರ ಸರ್ಕಾರಿ ಕೆರೆಯಲ್ಲಿ ನಡೆದಿದ್ದು, ಈ ಕರೆ ೮ ಎಕರೆ ೩೬ ಗುಂಟೆ ವಿಸ್ತೀರ್ಣ ಹೊಂದಿದೆ. ನಗರಸಭೆ ಸದಸ್ಯರಾದ ಲತಾ ಚಂದ್ರಶೇಖರ್ ಹಾಗು ಆರ್. ಮೋಹನ್‌ಕುಮಾರ್ ಸ್ಥಳದಲ್ಲಿಯೇ ಉಪಸ್ಥಿತರಿದ್ದು, ಬೌಂಡರಿ ನಿಗದಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ ವೇದಿಕೆ ಅಧ್ಯಕ್ಷ ಆರ್. ವೇಣುಗೋಪಾಲ್ ಅವರನ್ನು ಅಭಿನಂದಿಸಿದರು.
ತಹಸೀಲ್ದಾರ್ ಆರ್. ಪ್ರದೀಪ್, ಗ್ರಾಮ ಲೆಕ್ಕಾಧಿಕಾರಿ ಅನಿಲ್‌ರಾಜ್, ಭೂದಾಖಲೆಗಳ ಸಹಾಯಕ ನಿರ್ದೇಶಕ ಎನ್. ದೇವೇಂದ್ರಪ್ಪ, ಪರ್ಯಾವೇಕ್ಷಕ ಎ.ಎಲ್ ನಟರಾಜ್, ಸರ್ವೇಯರ್ ಎಚ್.ಎಲ್ ಮಂಜಾನಾಯ್ಕ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಎಚ್.ಎಂ ಮನುಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ರಂಗರಾಜಪುರೆ, ಕಂದಾಯ ಅಧಿಕಾರಿ ರಾಜ್‌ಕುಮಾರ್, ರಾಜ್ಯಸ್ವ ನಿರೀಕ್ಷಕ ಆರ್. ಚೇತನ್, ಸಿಬ್ಬಂದಿ ವರ್ಗದವರಾದ ದೊಡ್ಡಯ್ಯ, ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ದೇವರಾಜ್ ಹಾಗು ಸಿಬ್ಬಂದಿ ವರ್ಗದವರಿಗೆ ಆರ್. ವೇಣುಗೋಪಾಲ್ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment