ಭದ್ರಾವತಿ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಧನ್ವಂತರಿ ಉದ್ಯಾನವನದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಶನಿವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಭದ್ರಾವತಿ, ಜೂ. ೧೧ : ಪ್ರಕೃತಿ ನಮ್ಮ ಬದುಕಿಗೆ ಅಗತ್ಯವಿರುವ ಎಲ್ಲವನ್ನು ನೀಡುವ ಮೂಲಕ ಅದರ ಧರ್ಮವನ್ನು ಪಾಲಿಸುತ್ತಿದೆ. ಆದರೆ ನಾವು ಪ್ರಕೃತಿ ಉಳಿಸುವ ನಮ್ಮ ಧರ್ಮವನ್ನು ಪಾಲಿಸುತ್ತಿಲ್ಲ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ವಿಷಾದ ವ್ಯಕ್ತಪಡಿಸಿದರು.
ಅವರು ವೇದಿಕೆ ವತಿಯಿಂದ ಶನಿವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಧನ್ವಂತರಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಕೃತಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಇದನ್ನು ನಾವೆಲ್ಲರೂ ಸರಿಯಾಗಿ ಅರ್ಥ ಮಾಡಿಕೊಂಡು ಮುನ್ನಡೆಯಬೇಕೆಂದರು.
ಸಹಾಯಕ ಅರಣ್ಯಾಧಿಕಾರಿ ರಮೇಶ್ ಪುಟ್ನಳ್ಳಿ, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಸೇರಿದಂತೆ ಇನ್ನಿತರರು ಮಾತನಾಡಿ, ಪ್ರತಿಯೊಬ್ಬರು ಪರಿಸರ ಉಳಿಸುವ ಪ್ರಜ್ಞೆ ಬೆಳೆಸಿಕೊಳ್ಳಬೇಕಾಗಿದೆ. ಉಪಸ್ಥಿತರಿದ್ದರು.
ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಪೌರ ಕಾರ್ಮಿಕರಾದ ಅಂತೋಣಿ, ಶಾಂತ ಹಾಗು ಉದ್ಯಾನವನ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ಸ್ಥಳೀಯ ಹಿರಿಯರಾದ ನಂಜುಂಡೇಗೌಡ, ತಮ್ಮಯ್ಯಗೌಡ, ರಾಜಣ್ಣ, ಶಿವರಾಮಣ್ಣ, ರೆಡ್ಡಿ, ಭೈರಪ್ಪಗೌಡ ಹಾಗು ದಿನೇಶ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಸಿಗಳನ್ನು ವಿತರಸಿ ಸಿಹಿ ಹಂಚಲಾಯಿತು. ವೇದಿಕೆ ಕಾರ್ಯದರ್ಶಿ ಲತಾ ಪ್ರಭಾಕರ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಶೀಲಾ ರವಿ ವಂದಿಸಿದರು.
No comments:
Post a Comment