ಭದ್ರಾವತಿ, ಜೂ. ೨೭: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಬಿ.ಎಚ್ ರಸ್ತೆ ಅಪ್ಪರ್ ಹುತ್ತಾದಿಂದ ಸಭಾ ವೇದಿಕೆವರೆಗೂ ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಹಾಗು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ಬಿ.ಎಚ್ ರಸ್ತೆ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ತಾಲೂಕು ಕಛೇರಿ ರಸ್ತೆಯಲ್ಲಿ ಸಾಗಿ ಕೆಎಸ್‌ಆರ್‌ಟಿಸಿ ಡಿಪೋ ವೃತ್ತ ಮೂಲಕ ಸಿದ್ದಾರೂಢನಗರದ ಬಸವೇಶ್ವರ ಸಭಾ ಭವನದ ವರೆಗೂ ಸಾಗಿತು.
ಪುರುಷ ಮತ್ತು ಮಹಿಳೆಯರ ಡೊಳ್ಳು ಕುಣಿತ, ಗೊಂಬೆ ನೃತ್ಯ ಸೇರಿದಂತೆ ಇನ್ನಿತರ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು. ಕೆಂಪೇಗೌಡ ವೇಷದಾರಿ ಎಲ್ಲರ ಗಮನ ಸೆಳೆದರು.
ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಎಂಎಸ್ಎಂಇ ಘಟಕದ ರಾಜ್ಯಾಧ್ಯಕ್ಷ ಎಚ್.ಸಿ ರಮೇಶ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಬಾಲಕೃಷ್ಣ, ತಿಮ್ಮೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಹಾಗೂ ಪದಾಧಿಕಾರಿಗಳು, ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷ ಎಂ.ಎಸ್ ಸುಧಾಮಣಿ ಹಾಗೂ ಪದಾಧಿಕಾರಿಗಳು, ಕೆಂಪೇಗೌಡ ಯುವ ಪಡೆ ಅಧ್ಯಕ್ಷ ಆರ್. ಮೋಹನ್ ಕುಮಾರ್ ಪದಾಧಿಕಾರಿಗಳು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್. ರಮೇಶ್, ನಗರಸಭೆ ಅಧ್ಯಕ್ಷೆ ಗೀತ ರಾಜಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನು ಕುಮಾರ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಒಕ್ಕಲಿಗ ಸಮಾಜದ ಮುಖಂಡರು ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment