ಭದ್ರಾವತಿಯಲ್ಲಿ ಯುರೋ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಪುಟಾಣಿ ಮಕ್ಕಳಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು.
ಭದ್ರಾವತಿ, ಜೂ. ೧೫: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್‌ರವರು ಬುಧವಾರ ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ನಡುವೆ ಕೆಲ ಸಮಯ ಮಕ್ಕಳೊಂದಿಗೆ ಸಂಭ್ರಮಿಸಿದರು.
ಸಚಿವರು ಮಕ್ಕಳೊಂದಿಗೆ ತೋರಿದ ಪ್ರೀತಿ ಭಾವನೆ ಮೆಚ್ಚುಗೆಗೆ ಪಾತ್ರವಾಯಿತು. ಯುರೋ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಪುಟಾಣಿ ಮಕ್ಕಳಿಗೆ ಸಚಿವರು ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೆಲವು ಮಕ್ಕಳನ್ನು ಖುಷಿಯಿಂದ ಮಾತನಾಡಿದರು.
ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಮಕ್ಕಳಿಂದ ಗುಲಾಬಿ ಹೂಗಳನ್ನು ಸ್ವೀಕರಿಸಿ ಸಂಭ್ರಮಿಸಿದರು.
ಇದೆ ರೀತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಂದ ಗುಲಾಬಿ ಹೂಗಳನ್ನು ಸ್ವೀಕರಿಸಿ ಸಂಭ್ರಮಿಸಿದರು.
ತಾಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಚಿವರು ಮಕ್ಕಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ತೋರಿಸುವಂತೆ ಕಿವಿ ಮಾತು ಹೇಳುವ ಮೂಲಕ ಅವರೊಂದಿಗೆ ಮಧ್ಯಾಹ್ನ ಬಿಸಿಯೂಟ ಸೇವಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಮಕ್ಕಳೊಂದಿಗೆ ಮಧ್ಯಾಹ್ನ ಬಿಸಿಯೂಟ ಸೇವಿಸಿದರು.
ಶಂಕರಮಠದಲ್ಲಿ ಸಚಿವರಿಗೆ ಸನ್ಮಾನ :
ಸಿದ್ದಾರೂಢ ನಗರದಲ್ಲಿರುವ ಶ್ರೀ ಶಂಕರ ಮಠದ ವತಿಯಿಂದ ಬುಧವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಿರೀಶ್, ಶಾಂತ ಕುಮಾರ್, ಸುರೇಶ್, ಪೂರ್ಣಿಮಾ, ಸುಮಾ, ಉಷಾ,ಸಿದ್ದಲಿಂಗಯ್ಯ, ನಾಗಜ್ಯೋತಿ, ಶಿಲ್ಪರಾಣಿ, ಶಶಿಕಲಾ, ರೇಖಾ, ಸೌಖ್ಯ, ಸ್ವಾತಿ, ರಶ್ಮಿ, ಭಾರತಿ, ಜಯಲಕ್ಷ್ಮಿ ಹಾಗು ಶಂಕರ ಮಠದ ಪದಾಧಿಕಾರಿಗಳು ಮತ್ತು ಶಾರದಾ ಭಜನಾ ಮಂಡಳಿ ಸದಸ್ಯೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment