ಭದ್ರಾವತಿ, ಜೂ. ೨೭: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮೊದಲ ದಿನ ೧೨೪ ವಿದ್ಯಾರ್ಥಿಗಳ ಪೈಕಿ ೧೧೨ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮೊದಲ ದಿನ ವಿಜ್ಞಾನ ವಿಷಯ ಪರೀಕ್ಷೆ ನಡೆದಿದ್ದು, ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಜ್ಯೂನಿಯರ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ೫೬ ವಿದ್ಯಾರ್ಥಿಗಳ ಪೈಕಿ ೫೨ ಹಾಗು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ೬೮ ವಿದ್ಯಾರ್ಥಿಗಳ ಪೈಕಿ ೬೦ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು ೧೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ.
No comments:
Post a Comment