ಭದ್ರಾವತಿ ತಾಲೂಕಿನ ಅಂತರಗಂಗೆ ವಲಯದ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪೇಗೌಡ ನಗರದ ಕಾರೇಹಳ್ಳಿ ಕೆರೆಗೆ ಬಾಗಿನ ಅರ್ಪಣೆ, ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡಿದ್ದರು.
ಭದ್ರಾವತಿ, ಜೂ. ೨೮: ಕೆರೆಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೈಗೊಂಡಿರುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ತಾಲೂಕಿನ ಅಂತರಗಂಗೆ ವಲಯದ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪೇಗೌಡ ನಗರದ ಕಾರೇಹಳ್ಳಿ ಕೆರೆಗೆ ಬಾಗಿನ ಅರ್ಪಣೆ, ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಯೋಜನೆ ವತಿಯಿಂದ ೭.೫೦ ಲಕ್ಷ ರು. ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯ ಮಾದರಿಯಾಗಿದ್ದು, ಎಲ್ಲರೂ ಸೇರಿ ಕೆರೆಗಳನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ೨ ಕೋ. ರು. ವೆಚ್ಚದಲ್ಲಿ ೨೪ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕಾರೇಹಳ್ಳಿ ಕೆರೆ ಅಭಿವೃದ್ಧಿಪಡಿಸಲು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೆರೆ ಸಮಿತಿ ಸದಸ್ಯರು ಹೆಚ್ಚಿನ ಸಹಕಾರ ನೀಡಿದ್ದು, ಇದರಿಂದಾಗಿ ಕೆರೆಯನ್ನು ಸುಂದರವಾಗಿ ನಿರ್ಮಾಣ ಮಾಡಲು ಸಾಧ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಸಹಾಯಕ ನಿರ್ದೇಶಕರಾದ ಉಪೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷೆ ಅಂಬಿಕಾ, ಕೆರೆ ಸಮಿತಿ ಅಧ್ಯಕ್ಷ ಯೋಗೀಶ್, ಕೆರೆ ಇಂಜಿನೀಯರ್ ಗಣಪತಿ, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ವೈ. ಪ್ರಕಾಶ್, ಕಾರೇಹಳ್ಳಿ ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು, ಕೃಷಿ ಮೇಲ್ವಿಚಾರಕ ಗೋವಿಂದಪ್ಪ, ವಲಯದ ಮೇಲ್ವಿಚಾರಕ ಕುಮಾರ್, ಸ್ಥಳೀಯ ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಊರಿನ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
No comments:
Post a Comment