ಭದ್ರಾವತಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರಿಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ಪಾಂಡಿಚೆರಿಯಲ್ಲಿ ನಡೆದ ೩ನೇ ಓಪನ್ ನ್ಯಾಷನಲ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದು, ಬುಧವಾರ ನಗರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂರವರು ಹೂವಿನ ಹಾರ ಹಾಕುವ ಮೂಲಕ ಅಭಿನಂದಿಸಿ ಸಿಹಿ ಹಂಚಿದರು.
ಭದ್ರಾವತಿ, ಜೂ. ೮: ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರಿಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ಪಾಂಡಿಚೆರಿಯಲ್ಲಿ ನಡೆದ ೩ನೇ ಓಪನ್ ನ್ಯಾಷನಲ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಯೂತ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ಕೆ. ಸಮಥ ಶಾಟ್‌ಪುಟ್‌ನಲ್ಲಿ ಪ್ರಥಮ, ಡಿ. ರುಷಿಕ ಯೋಗಾಸನ ಪ್ರಥಮ, ಸಮರ್ಥ್ ಚಕ್ರವರ್ತಿ ೧೦೦ ಮೀಟರ್ ಓಟದಲ್ಲಿ ಪ್ರಥಮ, ಜಸ್ವಂತ್ ರೆಡ್ಡಿ ಮತ್ತು ಶರಥ್ವಿ ಭಾಗ್ಸಲೆ ೨೦೦ ಮೀಟರ್ ಓಟದಲ್ಲಿ ಪ್ರಥಮ, ಮಹಮದ್ ರಯಾನ್ ೪೦೦ ಮೀಟರ್ ಓಟದಲ್ಲಿ ಪ್ರಥಮ, ಸಮರ್ಥ್ ಪುರಾಣಿಕ್ ಮತ್ತು ಜಿ. ಚಿನ್ಮಯ ಪ್ರಸಾದ್ ಚದುರಂಗದಲ್ಲಿ ಪ್ರಥಮ ಹಾಗು ಬಿ.ಎಂ ವೇದಾಂತ್ ಡಿಸ್ಕ್ ಥ್ರೋನಲ್ಲಿ ಪ್ರಥಮ ಸ್ಥಾನ ವೈಯಕ್ತಿಕ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಎಲ್. ಪ್ರಿನ್ಸ್, ಬಿ.ಜಿ ಸಿದ್ದಾರ್ಥ್, ಎಂ. ಚೇತನ್, ಎಸ್. ಪ್ರೀತಮ್ ಅವರನ್ನೊಳಗೊಂಡ ಖೋ ಖೋ ತಂಡ ಪ್ರಥಮ ಸ್ಥಾನದೊಂದಿಗೆ ಬಹುಮಾನ ತನ್ನದಾಗಿಸಿಕೊಂಡಿದೆ.
ಬುಧವಾರ ನಗರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂರವರು ಹೂವಿನ ಹಾರ ಹಾಕುವ ಮೂಲಕ ಅಭಿನಂದಿಸಿ ಸಿಹಿ ಹಂಚಿದರು. ವಿದ್ಯಾರ್ಥಿಗಳೊಂದಿಗೆ ತರಬೇತಿದಾರ ಹಾಗು ಪೋಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕೇಂದ್ರಿಯ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳು ಹಾಗು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment