ಭದ್ರಾವತಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ, ಜೂ. ೨೫: ನಗರದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎ.ಎನ್ ಕಾರ್ತಿಕ್ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
ಲಯನ್ಸ್ ಕ್ಲಬ್ ೨ನೇ ಜಿಲ್ಲಾ ಉಪ ಗೌರ್ವನರ್ ಮಹಮದ್ ಹನೀಫ್ ಪದಗ್ರಹಣ ಬೋಧಿಸಿದರು. ದೈವಜ್ಞ ಬ್ರಾಹ್ಮಣ ಸಂಘದ ಎಂ. ನಾಗರಾಜ ಶೇಟ್ ಕಾರ್ಯದರ್ಶಿಯಾಗಿ ಹಾಗು ಜಿ.ಪಿ ದರ್ಶನ್ ಖಜಾಂಚಿಯಾಗಿ, ಉಳಿದಂತೆ ಲಿಯೋ ಕ್ಲಬ್ ಅಧ್ಯಕ್ಷರಾಗಿ ನಿಖಿತಾ ಎನ್ ಶೇಟ್, ಕಾರ್ಯದರ್ಶಿಯಾಗಿ ಆರ್. ಶ್ರೇಷ್ಠ ಮತ್ತು ಖಜಾಂಚಿಯಾಗಿ ಮೋನಾಲ್ ಕೆ. ಗೌಡ ಹಾಗು ಇನ್ನಿತರರು ಅಧಿಕಾರ ಸ್ವೀಕರಿಸಿದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕ್ಲಬ್ ಪ್ರಮುಖರಾದ ಬಿ. ದಿವಾಕರ ಶೆಟ್ಟಿ, ಹೆಬ್ಬಂಡಿ ನಾಗರಾಜ್, ನಿಕಟಪೂರ್ವ ಪದಾಧಿಕಾರಿಗಳಾದ ಬಿ.ಎಸ್ ಮಹೇಶ್‌ಕುಮಾರ್, ಡಿ. ಶಂಕರಮೂರ್ತಿ, ವಿನೋದ್ ಗಿರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment