೩ನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್‌ರವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಭದ್ರಾವತಿ, ಜೂ. ೯: ೩ನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್‌ರವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್ ಇಂಜನಿಯರಿಂಗ್ ಕಾಲೇಜಿನಲ್ಲಿ ಯೋಗ ಗಂಗೋತ್ರಿ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೬೦ ವರ್ಷ ಮೇಲ್ಪಟ್ಟವರ ವಿಭಾಗದ ಯೋಗ ಸ್ಪರ್ಧೆಯಲ್ಲಿ ಡಿ. ನಾಗರಾಜ್‌ರವರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಕರ್ನಾಟಕ ಯೋಗ ಸಂಸ್ಥೆ ಕಾರ್ಯದರ್ಶಿ ಡಿ. ಪುಟ್ಟೇಗೌಡ ಹಾಗು ಕ್ರೀಡಾಭಿಮಾನಿಗಳು ನಾಗರಾಜ್‌ರವರನ್ನು ಅಭಿನಂದಿಸಿದ್ದಾರೆ.
No comments:
Post a Comment