ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪುರವರು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗು ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ಗುರುವಾರ ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೨: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪುರವರು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗು ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ಗುರುವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕುವೆಂಪುರವರು ಈ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕೆಂಬ ಆಶಯ ಹೊಂದಿದ್ದರು. ಇದಕ್ಕೆ ಪೂರಕವೆಂಬಂತೆ ಅವರು ರಚಿಸಿರುವ ಜೈ ಭಾರತ ಜನನಿಯ ತನುಜಾತೆ ನಾಡಗೀತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಗೇಲಿ ಮಾಡುವ ಮೂಲಕ ಅವಮಾನಿಸಲಾಗಿದೆ. ಅಲ್ಲದೆ ನಾಡಗೀತೆಯ ಸಾಹಿತ್ಯವನ್ನು ಪಠ್ಯದಿಂದ ತೆಗೆದು ಅಪಮಾನಗೊಳಿಸಲಾಗಿದೆ. ಜೊತೆಗೆ ಸಾಮಾಜಿಕ ಮಹಿಳಾ ಸುಧಾರಕರಾದ ಸಾವಿತ್ರಿಬಾಯಿ ಪುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಸೇರಿದಂತೆ ಹಲವರ ವಿವರಗಳಿಗೆ ಪಠ್ಯ ಪುಸ್ತಕ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ವೇದಿಕೆ ಇದನ್ನು ಖಂಡಿಸುವ ಜೊತೆಗೆ ತಪ್ಪತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದೆ.
ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಉಪಾಧ್ಯಕ್ಷೆ ಪುಷ್ಪ ಕೇಶವಮೂರ್ತಿ, ಸಹಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್ ಸೇರಿದಂತೆ ವೇದಿಕೆಯ ನಿರ್ದೇಶಕರು ಉಪಸ್ಥಿತರಿದ್ದರು.
No comments:
Post a Comment