ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಹಾಗು ನಗರಸಭೆ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಉದ್ಘಾಟಿಸಿದರು.
ಭದ್ರಾವತಿ, ಜೂ. ೨೧; ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಯೋಗ ಕಲಿಕೆಯೊಂದಿಗೆ ಅದನ್ನು ತಮ್ಮ ದಿನನಿತ್ಯದ ಬದುಕಿನಲ್ಲಿ ರೂಢಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಕರೆ ನೀಡಿದರು.
ಅವರು ಮಂಗಳವಾರ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಹಾಗು ನಗರಸಭೆ ವತಿಯಿಂದ ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಯೋಗ ಒಂದು ದಿನಕ್ಕೆ ಸೀಮಿತವಾಗಬಾರದು ದಿನನಿತ್ಯದ ಚಟುವಟಿಕೆಯ ಭಾಗವಾಗಬೇಕು. ಈ ಮೂಲಕ ಆರೋಗ್ಯವಂತೆ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅಂತರಾಷ್ಟ್ರೀಯ ಯೋಗಪಟು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಡಿ. ನಾಗರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಆಯುಷ್ ವೈದ್ಯರುಗಳಾದ ಡಾ. ಅನಿಲ್‌ಕುಮಾರ್, ಡಾ,ಪುಷ್ಪಾ, ಕೆಎಸ್‌ಆರ್‌ಪಿ ೮ನೇ ಪಡೆಯ ಇನ್ಸ್‌ಪೆಕ್ಟರ್ ಮಂಜುನಾಥ್, ಡಾ. ವೀಣಾಭಟ್, ಉದ್ಯಮಿ ಬಿ.ಕೆ ಜಗನ್ನಾಥ್, ಎಂ.ಪ್ರಭಾಕರ್, ನಗರಸಭಾ ಸದಸ್ಯರುಗಳಾದ ಅನುಪಮಾ ಚನ್ನೇಶ್, ಅನುಪಮಾ, ಮೋಹನ್, ಮಹಲಿಂಗಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೆಎಸ್‌ಆರ್‌ಪಿ ೮ನೇ ಪಡೆ, ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜ್ಯುಕೇಷನ್ ಸೊಸೈಟಿ ವಿದ್ಯಾರ್ಥಿಗಳು, ನಯನ ಆಸ್ಪತ್ರೆ, ಪತಾಂಜಲಿ ಯೋಗ ಕೇಂದ್ರ, ಸ್ವಾಮಿ ವಿವೇಕಾನಂದ, ಸಂಚಿ ಹೊನ್ನಮ್ಮ ಯೋಗ ಕೇಂದ್ರ ಸೇರಿದಂತೆ ಹಾಗೂ ವಿವಿಧ ಯೋಗ ಕೇಂದ್ರಗಳ ಯೋಗಪಟುಗಳು ಪಾಲ್ಗೊಂಡು ಯೋಗದ ವಿವಿಧ ಭಂಗಿಗಳ ಮೂಲಕ ಅವುಗಳ ಮಹತ್ವ ತಿಳಿಸಿದರು.
No comments:
Post a Comment