ಭದ್ರಾವತಿ ನಗರಸಭೆ ವಾರ್ಡ್ ನಂ.೫ರ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಅವರು ನಗರಸಭಾ ಸದಸ್ಯರಾಗಿ ೧ ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆ ಮನೆ ಮನೆಗೆ ಮುಟ್ಟಿಸುವ ಹಾಗು ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಜೂ. ೨೧: ನಗರಸಭೆ ವಾರ್ಡ್ ನಂ.೫ರ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಅವರು ನಗರಸಭಾ ಸದಸ್ಯರಾಗಿ ೧ ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆ ಮನೆ ಮನೆಗೆ ಮುಟ್ಟಿಸುವ ಹಾಗು ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಿದರು.
ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.೮೫ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ವಿಜೇತ, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್, ಖೋ ಖೋ ತರಬೇತಿದಾರ ಕೆ.ಟಿ ಶ್ರೀನಿವಾಸ್ ಮತ್ತು ರಾಷ್ಟ್ರೀಯ ಕುಸ್ತಿ ಕ್ರೀಡಾಪಟು ಕಿರಣ್ ನಾಗರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ನಗರಸಭಾ ಸದಸ್ಯೆ ಅನುಪಮಾ, ಮಾಜಿ ಉಪಾಧ್ಯಕ್ಷ ವೆಂಕಟೇಶ್, ಪ್ರಮುಖರಾದ ನರಸಿಂಹಚಾರ್, ಚನ್ನೇಶ್, ಸುದರ್ಶನ್, ರೇವಣಕರ್, ಪರಶುರಾಮ್ ಭೋವಿ, ಕಾರನಾಗರಾಜ್, ಮಂಜುನಾಥ್, ಶೋಭಾ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬಿ.ಎಸ್ ನಾರಾಯಣಪ್ಪ ಪ್ರಾಸ್ತಾವಿಕ ನುಡಿಗಳಾಡಿದರು. ಕಾಂತರಾಜ್ ಸ್ವಾಗತಿಸಿ, ರಾಜು ರೇವಣಕರ್ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.
No comments:
Post a Comment