ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೋಡಿಹಳ್ಳಿ ಗ್ರಾಮದ ಜಿ.ಆರ್. ನಾಗರಾಜ್ ಗೌಡ್ರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಭದ್ರಾವತಿ, ಜೂ. ೮ : ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೋಡಿಹಳ್ಳಿ ಗ್ರಾಮದ ಜಿ.ಆರ್. ನಾಗರಾಜ್ ಗೌಡ್ರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿದ್ದ ಎಚ್. ಕುಬೇರನಾಯ್ಕರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಆರ್ ನಾಗರಾಜ್ ಗೌಡ್ರು ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿದರು.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಚುಕ್ಕಾಣಿ ಹಿಡಿದಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಅಧಿಕಾರ ಹಂಚಿಕೆ ಸೂತ್ರದಡಿ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಕುಬೇರನಾಯ್ಕರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಪಂಚಾಯಿತಿ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್, ಮಾಜಿ ಅಧ್ಯಕ್ಷರಾದ ಸಿ. ಮಲಕ್ ವೀರಪ್ಪನ್, ಎಂ. ಜಯಣ್ಣ, ನಿಕಟಪೂರ್ವ ಉಪಾಧ್ಯಕ್ಷ ಕುಬೇರ ನಾಯ್ಕ, ತಾಲೂಕು ಸುಗ್ರಾಮ ಅಧ್ಯಕ್ಷೆ ಗೌರಮ್ಮ ಮಹದೇವ್, ಸದಸ್ಯರಾದ ವಿಶ್ವನಾಥ್, ಸ್ವಾಮಿನಾಥನ್, ಆರ್.ಎನ್ ರುದ್ರೇಶ್, ನೀಲಾಬಾಯಿ, ಪಾರ್ವತಿ ಬಾಯಿ, ಬಿ. ಸಿದ್ದಮ್ಮ, ಭಾಗ್ಯ ಹಾಗು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್. ಅಶೋಕ್, ಕಾರ್ಯದರ್ಶಿ ಸಿ. ಸತೀಶ್ ಗೌಡ ಮತ್ತು ಗ್ರಂಥಾಲಯ ಮೇಲ್ವಿಚಾರಕ ಡಿ. ಮಹೇಶ್ವರನಾಯ್ಕ ಸೇರಿದಂತೆ ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment