ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಲ್ಯಾಣ ಕರ್ನಾಟಕ ವೇದಿಕೆ ವತಿಯಿಂದ ಭದ್ರಾವತಿ ಜ್ಯೂನಿಯರ್ ವಿಷ್ಣುವರ್ಧನ್, ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್‌ರವರಿಗೆ ಕಲ್ಯಾಣ ಸೇವಾ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭದ್ರಾವತಿ, ಜೂ. ೧೩ : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಲ್ಯಾಣ ಕರ್ನಾಟಕ ವೇದಿಕೆ ವತಿಯಿಂದ ನಗರದ ಜ್ಯೂನಿಯರ್ ವಿಷ್ಣುವರ್ಧನ್, ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್‌ರವರಿಗೆ ಕಲ್ಯಾಣ ಸೇವಾ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪವರ್ ಸ್ಟಾರ್, ಸಮಾಜ ಸೇವಕ ಪುನೀತ್ ರಾಜ್‌ಕುಮಾರ್ ಸವಿನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ಸಂಭ್ರಮ ಹಾಗು ಕಲ್ಯಾಣ ಸೇವಾ ಕಲಾರತ್ನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಮಾಜಿ ಅಧ್ಯಕ್ಷರಾಗಿರುವ ಅಪೇಕ್ಷ ಮಂಜುನಾಥ್‌ರವರು ಶಿಕ್ಷಣ ಹಾಗು ಕಲಾರಂಗ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಗಾಯಕ ಶಶಿಧರ್ ಕೋಟೆ, ಕಿರುತೆರೆ ನಟ ಮೈಕೋ ಚಂದ್ರು, ರಂಗಭೂಮಿ ಹಾಗೂ ಚಲನಚಿತ್ರ ನಟಿ ಮಾಲತಿ ಹಾಗೂ ಕಲ್ಯಾಣ ಕರ್ನಾಟಕ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಅಶೋಕ್ ಹಾಗೂ ತಾಲೂಕು ಘಟಕದ ಅಧ್ಯಕ್ಷ ಕಲಾವಿದ ಚಂದ್ರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment