ದಾವಣಗೆರೆ ಗಾನಸುಧೆ ಕಲಾ ಬಳಗ ವತಿಯಿಂದ ಭದ್ರಾವತಿ ಜ್ಯೂನಿಯರ್ ವಿಷ್ಣುವರ್ಧನ್, ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್ ಅವರಿಗೆ ಕಲಾಭೂಷಣ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭದ್ರಾವತಿ, ಜೂ. ೨೮: ದಾವಣಗೆರೆ ಗಾನಸುಧೆ ಕಲಾ ಬಳಗ ವತಿಯಿಂದ ನಗರದ ಜ್ಯೂನಿಯರ್ ವಿಷ್ಣುವರ್ಧನ್, ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್ ಅವರಿಗೆ ಕಲಾಭೂಷಣ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಪೇಕ್ಷ ಮಂಜುನಾಥ್ ಅವರು ಕಲಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಬಳಗದ ವತಿಯಿಂದ ಡಾ. ಪುನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಗೀತಾ ನುಡಿನಮನ ಮತ್ತು ಸುಗಮ ಸಂಗೀತ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಪೇಕ್ಷ ಮಂಜುನಾಥ್ ಅವರು ಹಲವಾರು ವರ್ಷಗಳಿಂದ ದೈಹಿಕ ಶಿಕ್ಷಕ ವೃತ್ತಿಯೊಂದಿಗೆ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಿರುದು, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರನ್ನು ಕಲಾಭಿಮಾನಿಗಳು ಅಭಿನಂದಿಸಿದ್ದಾರೆ.
No comments:
Post a Comment