ಭದ್ರಾವತಿ ನ್ಯೂಟೌನ್ ವಸತಿ ಗೃಹದಲ್ಲಿ ಬುಧವಾರ ಬೆಳಿಗ್ಗೆ ಪ್ರತ್ಯಕ್ಷವಾದ ಚಿರತೆ.
ಭದ್ರಾವತಿ, ಜೂ. ೨೨ : ನಗರದ ನ್ಯೂಟೌನ್ ವಸತಿ ಗೃಹದಲ್ಲಿ ಬುಧವಾರ ಬೆಳಿಗ್ಗೆ ಪ್ರತ್ಯಕ್ಷವಾದ ಚಿರತೆ ವಿಐಎಸ್‌ಎಲ್ ಕಾರ್ಖಾನೆಯಿಂದ ಬಂದಿರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಈ ಹಿಂದೆ ಸುಮಾರು ೨ ವರ್ಷಗಳ ಹಿಂದೆ ಕಾರ್ಖಾನೆಯಲ್ಲಿ ಚಿರತೆ ವಾಸವಿರುವ ಬಗ್ಗೆ ಸುಳಿವುಗಳು ಲಭ್ಯವಾಗಿದ್ದವು. ಅಲ್ಲದೆ ಚಿರತೆಗೆ ನಾಯಿಗಳು ಬಲಿಯಾಗಿರುವ ಮಾಹಿತಿ ಸಹ ಲಭ್ಯವಾಗಿದ್ದವು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಕೆಲವು ಕಾರ್ಮಿಕರು ಸಹ ಚಿರತೆ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಖಾನೆಯಲ್ಲಿ ಬೀಡುಬಿಟ್ಟು ಜಾಲಾಡಿದ್ದರು. ಅಲ್ಲದೆ ಬೋನ್ ಸಹ ಇಡಲಾಗಿತ್ತು. ಆದರೆ ಚಿರತೆ ಮಾತ್ರ ಪ್ರತ್ಯಕ್ಷವಾಗಿರಲಿಲ್ಲ.
ಇದೀಗ ಈ ಕುರಿತು ಅರಣ್ಯ ಇಲಾಖೆ ಸಹ ಚಿರತೆ ವಿಐಎಸ್‌ಎಲ್ ಕಾರ್ಖಾನೆಯಿಂದ ಬಂದಿರುವ ಅನುಮಾನ ವ್ಯಕ್ತಪಡಿಸುತ್ತಿದೆ. ಅದರಲ್ಲೂ ಜನವಸತಿ ಪ್ರದೇಶಕ್ಕೆ ಚಿರತೆ ದೂರದಿಂದ ಬಂದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ವಾಸ್ತವ್ಯವಾಗಿ ಚಿರತೆ ಮೂಲ ನೆಲೆ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
No comments:
Post a Comment