ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್‌ಗೆ ಮನವಿ
ಭದ್ರಾವತಿ ಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೩೦ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಯಿತು.
ಉಂಬ್ಳೆಬೈಲು ಹಾಗು ತಾಲೂಕಿನ ಕಲ್ಲಹಳ್ಳಿ ಮತ್ತು ೨೮ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಈ ಹಿನ್ನಲೆಯಲ್ಲಿ ಸಮರ್ಪಕವಾದ, ಪರಿಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರಾತಿ ಮಾಡಿಸುವುದು. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯಾನವನ, ರಸ್ತೆ, ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಲಾಗಿದೆ.
ದೊಣಬಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಸಮರ್ಪಕವಾದ, ಪರಿಶುದ್ಧವಾದ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದು. ದೊಣಬಘಟ್ಟ, ತಡಸ, ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಹಿಳೆಯರ ಅನುಕೂಲಕ್ಕಾಗಿ ದೊಣಬಘಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ೨೫ ಹಾಸಿಗೆಯುಳ್ಳ ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನಾಗಿ ಪರಿವರ್ತಿಸುವುದು. ಕೇಂದ್ರ ಸರ್ಕಾರದ ಮಾದರಿಯಂತೆ ಅಮೃತ್ ೨.೦ ಯೋಜನೆಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ತರುವುದು ಹಾಗು ನಗರಸಭೆ ವ್ಯಾಪ್ತಿ ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಬದಿಯಲ್ಲಿ ರಾಜಕಾಲುವೆ ನಿರ್ಮಿಸಲು ೩ ಕೋ. ರು. ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಲಾಗಿದೆ.
ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ. ಆನಂದ್, ಸದಸ್ಯರಾದ ಉಮೇಶ್, ಧರ್ಮಪ್ಪ, ಪುನೀತ್, ಗ್ರಾಮಸ್ಥರಾದ ಬೋಟ್ಯಾನಾಯ್ಕ್, ಕುಮಾರ್, ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment