ಭದ್ರಾವತಿ ತಾಲೂಕಿನ ಸೀತಾರಾಮಪುರದ ಶ್ರೀ ಲೇಪಾಕ್ಷಸ್ವಾಮಿ ಪ್ರೌಢಶಾಲೆಯಲ್ಲಿ ಬುಧವಾರ ಪೋಷಕರ ಸಭೆ ಮತ್ತು ಉಚಿತ ಸಮವಸ್ತ್ರ ವಿತರಣೆ ನಡೆಯಿತು.
ಭದ್ರಾವತಿ, ಜೂ. ೨೨ : ತಾಲೂಕಿನ ಸೀತಾರಾಮಪುರದ ಶ್ರೀ ಲೇಪಾಕ್ಷಸ್ವಾಮಿ ಪ್ರೌಢಶಾಲೆಯಲ್ಲಿ ಬುಧವಾರ ಪೋಷಕರ ಸಭೆ ಮತ್ತು ಉಚಿತ ಸಮವಸ್ತ್ರ ವಿತರಣೆ ನಡೆಯಿತು.
ಶಿಕ್ಷಕರು ಹಾಗು ದಾನಿಗಳ ನೆರವಿನೊಂದಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಲಾಯಿತು. ಈ ಹಿನ್ನಲೆಯಲ್ಲಿ ಶಾಲಾ ಆಡಳಿತ ಮಂಡಳಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದಿಸಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್, ಶಾಲೆಯ ಮುಖ್ಯ ಶಿಕ್ಷಕ ಎಸ್. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment