ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಹಾಗೂ ಕಾಗದನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-೨೦೦೩ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.
ಭದ್ರಾವತಿ, ಜೂ. ೨೩ : ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಹಾಗೂ ಕಾಗದನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-೨೦೦೩ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.
ಉಜ್ಜನಿಪುರ ಮತ್ತು ಕಾಗದನಗರದ ಹಲವೆಡೆ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು ೨,೧೦೦ ರೂ ದಂಡ ವಿಧಿಸಲಾಯಿತು. ಅಲ್ಲದೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಎಂ.ವಿ ಅಶೋಕ್, ಎಚ್‌ಐಓ ಆನಂದಮೂರ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್, ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಮಂಜುನಾಥ್ ಹಾಗೂ ನಗರ ಆರೋಗ್ಯ ಕೇಂದ್ರದ ಮನೋಹರ್, ಚೇತನ್ ಪಾಲ್ಗೊಂಡಿದ್ದರು.
No comments:
Post a Comment