ಪೊಲೀಸ್ ಉಮೇಶ್
ಭದ್ರಾವತಿ, ಜೂ. ೨೬ : ಸ್ನೇಹ ಜೀವಿ ಬಳಗದ ವತಿಯಿಂದ ಪೊಲೀಸ್ ಉಮೇಶ್ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಜೂ. ೨೭ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಬಿ.ಎಚ್ ರಸ್ತೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಟೋ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಿಹಿ ಹಂಚಿಕೆ, ಅನ್ನಸಂತರ್ಪಣೆ ಸಹ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಸಮಾಜದ ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೊಲೀಸ್ ಉಮೇಶ್ ಕೋರಿದ್ದಾರೆ.
No comments:
Post a Comment