ಭದ್ರಾವತಿ ಬಿ.ಎಚ್ ರಸ್ತೆ, ಕಡದಕಟ್ಟೆ ರೈಲ್ವೆ ಗೇಟ್ ಸಮೀಪದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ತಹಸೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ, ಮೇ. ೩: ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ ರೈಲ್ವೆ ಗೇಟ್ ಸಮೀಪದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ತಹಸೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಡದಕಟ್ಟೆ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಕಳೆದ ೩-೪ ತಿಂಗಳಿನಿಂದ ಈ ಭಾಗದಲ್ಲಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಸ್‌ಗಳು ಬೇರೆ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬಸ್ ಸೌಲಭ್ಯದಿಂದ ವಂಚಿತರಾಗಿದ್ದಾರೆ.
ಕಳೆದ ವರ್ಷ ಬಸ್ ಪಾಸ್ ಸೌಲಭ್ಯ ಪಡೆದುಕೊಂಡಿರುವ ವಿದ್ಯಾರ್ಥಿಗಳು ಪ್ರಸ್ತುತ ಸುಮಾರು ೩ ಕಿಲೋ ಮೀಟರ್‌ಗೂ ಹೆಚ್ಚಿನ ದೂರ ಕಾಲ್ನಡಿಗೆಯಲ್ಲಿ ಸಾಗಬೇಕಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ಇಲಾಖೆ ಅಧಿಕಾರಿಗಳು ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ಸಭೆ ಕರೆದು ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಲಾಗಿದೆ.
ಮನವಿಯನ್ನು ಶಿರಸ್ತೇದಾರ್ ರಾಧಕೃಷ್ಣ ಭಟ್ ಅವರಿಗೆ ಸಲ್ಲಿಸಲಾಯಿತು. ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment