ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಭದ್ರಾವತಿ ತಾಲೂಕಿನ ಶ್ರೀರಾಮನಗರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಅಸಂಘಟಿತ ಕಾರ್ಮಿಕರ ಕಾರ್ಡ್ ವಿತರಣೆ, ಅಭಿನಂದನಾ ಹಾಗು ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ಎರಡೂವರೆ ವರ್ಷದ ಲಕಿತ್ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೪: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ತಾಲೂಕಿನ ಶ್ರೀರಾಮನಗರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಅಸಂಘಟಿತ ಕಾರ್ಮಿಕರ ಕಾರ್ಡ್ ವಿತರಣೆ, ಅಭಿನಂದನಾ ಹಾಗು ಕೋವಿಡ್ ಜಾಗೃತಿ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ಎರಡೂವರೆ ವರ್ಷದ ಲಕಿತ್ ಗೌಡ ಹಾಗು ಬಸಲಿಕಟ್ಟೆ ನಿವಾಸಿ ಯೂತ್ ಗೇಮ್ಸ್ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಎಂ. ಹರ್ಷಿತ್ ಮತ್ತು ವೀರಾಪುರ ನಿವಾಸಿ ಯೂತ್ ಗೇಮ್ಸ್ ಅಂತರಾಷ್ಟ್ರೀಯ ಟ್ರಿಪಲ್ ಜಂಪ್ ಕ್ರೀಡಾಪಟು ಸಮರ್ಥ ಲೋಕೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಂಘದ ಗ್ರಾಮಾಂತರ ಅಧ್ಯಕ್ಷೆ ಶಕುಂತಲಾ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡ ಬಿ.ಎಸ್ ಗಣೇಶ್, ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಸಂಘದ ಸಂಸ್ಥಾಪಕ ಆಯನೂರ್ ಕುಪೇಂದ್ರ, ರಾಜ್ಯಾಧ್ಯಕ್ಷ ಕೇಶವಮೂರ್ತಿ ಪೇಟ್ಕರ್, ರಾಜ್ಯ ಸಂಘಟನಾ ಕಾರ್ಯದಶಿ ಪ್ರದೀಪ್, ಜಿಲ್ಲಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ತಾಲೂಕು ನಗರ ಅಧ್ಯಕ್ಷ ಬಾರಂದೂರು ಮಂಜುನಾಥ್, ನಗರ ಪ್ರಧಾನ ಕಾರ್ಯದರ್ಶಿ ರೂಪ ನಾಗರಾಜ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಲೋಲಾಕ್ಷಿ ರಂಗಸ್ವಾಮಿ, ಉಪಾಧ್ಯಕ್ಷೆ ಶಶಿಕಲಾ ಶಿವಮೂರ್ತಿ, ಕಾರ್ಯದರ್ಶಿ ಜಬಿವುಲ್ಲಾ, ಮೋಹನ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment