ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕನಕ ವಿದ್ಯಾಸಂಸ್ಥೆ ಆವರಣದಲ್ಲಿ ಭಾನುವಾರ ತಾಲೂಕು ಕುರುಬರ ಸಂಘದ ಚುನಾವಣೆ ನಡೆಯಿತು. ಎರಡು ಬಣಗಳ ನಡುವಿನ ಅಭ್ಯರ್ಥಿಗಳು ಮತಯಾಚನೆ ನಡೆಸಿದರು.
ಭದ್ರಾವತಿ, ಜು. ೧೭: ತಾಲೂಕು ಕುರುಬರ ಸಂಘದ ಚುನಾವಣೆ ಭಾನುವಾರ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕನಕ ವಿದ್ಯಾಸಂಸ್ಥೆ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.
ಒಟ್ಟು ೧೫ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ೨,೧೦೦ಕ್ಕೂ ಹೆಚ್ಚು ಮಂದಿ ಮತದಾನದ ಹಕ್ಕು ಹೊಂದಿದ್ದರು. ಬೆಳಿಗ್ಗೆ ೯ ಗಂಟೆಯಿಂದ ಮತದಾನ ಆರಂಭಗೊಂಡಿತು. ಮಳೆ ಇರದ ಕಾರಣ ಮಧ್ಯಾಹ್ನ ೧೨ ಗಂಟೆವರೆಗೆ ಬಿರುಸಿನ ಮತದಾನ ನಡೆಯಿತು.
ಹಾಲಿ ಅಧ್ಯಕ್ಷ ಬಿ.ಎಂ ಸಂತೋಷ್ ನೇತೃತ್ವದ ತಂಡ ಪುನಃ ಚುಕ್ಕಾಣಿ ಹಿಡಿಯಲು ೧೨ ಜನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಮಾಲಿ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ನೇತೃತ್ವದ ತಂಡ ಈ ಬಾರಿ ಚುಕ್ಕಾಣಿ ಹಿಡಿಯಲು ೧೫ ಜನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ತೀವ್ರ ಪೈಪೋಟಿಗೆ ಮುಂದಾಗಿರುವುದು ಕಂಡು ಬಂದಿತು.
ಮತದಾನ ಕೇಂದ್ರದ ಬಳಿ ಎರಡು ತಂಡಗಳ ಬೆಂಬಲಿಗರಿಂದ ಭರ್ಜರಿಯಾಗಿ ಮತಯಾಚನೆ ನಡೆಯಿತು. ಮತದಾನ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
No comments:
Post a Comment