ಭದ್ರಾವತಿ ತಾಲೂಕಿನ ನವಲೆ ಬಸಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶನಿವಾರ ಗ್ರಾಮಸ್ಥರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗು ಅಭಿಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.
ಭದ್ರಾವತಿ, ಜು. ೨: ತಾಲೂಕಿನ ನವಲೆ ಬಸಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶನಿವಾರ ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಿದ್ದಾರೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೂಲಕ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡುತ್ತಿದ್ದು, ಗ್ರಾಮಸ್ಥರು ನೆಮ್ಮದಿಯಿಂದ ಬದುಕಲು ಅಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿ ಸೂಕ್ತ ಕೈಗೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ಬಿಳಿಕಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೇಮಂತ್, ಸದಸ್ಯರಾದ ಸವಿತಾ, ನಾಗಮ್ಮ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ, ರಾಮ್ ಸೇನಾ ಜಿಲ್ಲಾಧ್ಯಕ್ಷ ಉಮೇಶ್ ಗೌಡ ಹಾಗು ಗ್ರಾಮದ ಹಿರಿಯರು, ಮಹಿಳೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment