ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು.
ಭದ್ರಾವತಿ, ಜು. ೨೨: ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ನಗರದ ಪ್ರಮುಖರು, ಪೋಷಕರು, ಕ್ರೀಡಾಭಿಮಾನಿಗಳು ವಿಜೇತ ತಂಡ ಆಗಮಿಸುತ್ತಿದ್ದಂತೆ ಮಳೆ ನಡುವೆಯೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಿದರು. ಅಲ್ಲದೆ ವಿಜೇತ ತಂಡದ ಎಲ್ಲರನ್ನು ಸನ್ಮಾನಿಸಿ ಅಭಿನಂದಿಸಿದರು. ನಂತರ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿರುವ ಸರ್ ಎಂ. ವಿಶ್ವೇಶ್ವರಾಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪಿಸಿಎ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ನೇಪಾಳ್ ಮತ್ತು ನ್ಯಾಷನಲ್ ಸ್ಪೋರ್ಟ್ಸ್ & ಎಜ್ಯುಕೇಷನ್ ಡೆವಲಪ್‌ಮೆಂಟ್ ಫೆಡರೇಷನ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೧೪ ವರ್ಷದೊಳಗಿನ ವಿಭಾಗದಲ್ಲಿ ಕೇಂದ್ರೀಯದ ವಿದ್ಯಾರ್ಥಿಗಳಾದ ಬಿ.ಎಂ ವೇದಾಂತ್ ಡಿಸ್ಕಸ್ ಥ್ರೋ, ಕೆ. ಸಮಥ ಗುಂಡು ಎಸೆತ, ಶರಥ್ವಿ ಬಾಗ್ಸಲೆ ೨೦೦ ಮೀ. ಓಟ, ಕೆ,ಎಸ್ ಮೊಹಮದ್ ರಯಾನ್ ೪೦೦ ಮೀ. ಓಟ, ಕೆ. ಸುಪ್ರಿತ ಯೋಗಾಸನ ಮತ್ತು ಡಿ. ಚಿನ್ಮಯ ಪ್ರಸಾದ್ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗು ಕೆ.ಸಿ ಸಮರ್ಥ್ ಪುರಾಣಿಕ್ ಚೆಸ್ ಮತ್ತು ಪಿ. ಜಸ್ವಂತ್ ರೆಡ್ಡಿ ೨೦೦ ಮೀ. ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ, ತರಬೇತಿದಾರರು, ಎಲ್. ವೆಂಕಟೇಶ್ ನಾಯಕ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಛಲವಾದಿ ಸಮಾಜದ ಪ್ರಮುಖರಾದ ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಮಂಜುನಾಥ್, ಎ. ತಿಪ್ಪೇಸ್ವಾಮಿ, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎ.ಟಿ ರವಿ, ನಗರಸಭಾ ಸದಸ್ಯ ಕೋಟೇಶ್ವರರಾವ್, ದಿಲೀಪ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಬಿ.ಎಂ ರವಿಕುಮಾರ್, ಧನುಷ್ ಬೋಸ್ಲೆ, ನಕುಲ್, ಮಂಜುನಾಥ್ ಕೊಯ್ಲಿ, ಗಿರೀಶ್ ಸೇರಿದಂತೆ ಪೋಷಕರು, ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
No comments:
Post a Comment