ಭದ್ರಾವತಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಸ್. ವಿರುಪಾಕ್ಷಪ್ಪ, ಉಪಾಧ್ಯಕ್ಷರಾಗಿ ರಾಜಶೇಖರನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರನ್ನು ಬ್ಯಾಂಕ್ ವತಿಯಿಂದ ಅಭಿನಂದಿಸಲಾಯಿತು.
ಭದ್ರಾವತಿ, ಜು. ೨೮: ನಗರದ ಚನ್ನಗಿರಿ ರಸ್ತೆಯಲ್ಲಿರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷರಾಗಿ ಹುಣಸೇಕಟ್ಟೆ ಗ್ರಾಮದ ಎಸ್. ವಿರುಪಾಕ್ಷಪ್ಪ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಣಸೇಕಟ್ಟೆ ಗ್ರಾಮದ ಎಸ್. ವಿರುಪಾಕ್ಷಪ್ಪ ಅಧ್ಯಕ್ಷರಾಗಿ ಮತ್ತು ಅರಸನಗಟ್ಟ ತಾಂಡ್ಯದ ರಾಜಶೇಖರನಾಯ್ಕ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಯಾಂಕಿನಲ್ಲಿ ಒಟ್ಟು ೧೩ ನಿರ್ದೇಶಕರಿದ್ದು, ಕಳೆದ ಕೆಲವು ವರ್ಷಗಳಿಂದ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment