ಭದ್ರಾವತಿ ನಗರಸಭೆ ವಾರ್ಡ್ ನಂ.೧ರ ವ್ಯಾಪ್ತಿಯ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ಗದ್ದಿಗೆ ಮಠದ ಸಮೀಪ ಚರಂಡಿ ಕಾಮಗಾರಿಗೆ ಮಂಗಳವಾರ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.
ಭದ್ರಾವತಿ, ಜು. ೧೨: ನಗರಸಭೆ ವಾರ್ಡ್ ನಂ.೧ರ ವ್ಯಾಪ್ತಿಯ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ಗದ್ದಿಗೆ ಮಠದ ಸಮೀಪ ಚರಂಡಿ ಕಾಮಗಾರಿಗೆ ಮಂಗಳವಾರ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಅನುದಾನದಲ್ಲಿ ಕಾಮಗಾರಿ ಮಂಜುರಾತಿಯಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ವಾರ್ಡ್ ನಂ.೧ರ ನಗರಸಭಾ ಸದಸ್ಯೆ ರೇಖಾ ಹಾಗೂ ಗ್ರಾಮಸ್ಥರಾದ ವಾಗೀಶ್, ಪ್ರಕಾಶ್, ಧನರಾಜ್, ದೇವರಾಜ್, ರಿತು ಕುಮಾರ್, ರವಿಕುಮಾರ್ ಶಾರದಾಬಾಯಿ, ವರಲಕ್ಷ್ಮಮ್ಮ ಮತ್ತು ಮಠದ ಅರ್ಚಕ ಮಂಜಯ್ಯ, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment