ಭದ್ರಾವತಿ ಉಂಬ್ಳೆಬೈಲು ರಸ್ತೆ ಅಂಡರ್ ಬ್ರಿಡ್ಜ್ ಬಳಿ ಎಲ್‌ಐಸಿ ಕಛೇರಿ ಮುಂಭಾಗ ಸೋಮವಾರ ಸಂಜೆ ಸುಮಾರು ೩೦ಕ್ಕೂ ಹೆಚ್ಚು ಕುರಿಗಳು ಚಲಿಸುತ್ತಿದ್ದ ರೈಲಿಗೆ ಸಿಲುಕಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ.
ಭದ್ರಾವತಿ, ಜು. ೪ : ನಗರದ ಉಂಬ್ಳೆಬೈಲು ರಸ್ತೆ ಅಂಡರ್ ಬ್ರಿಡ್ಜ್ ಬಳಿ ಎಲ್‌ಐಸಿ ಕಛೇರಿ ಮುಂಭಾಗ ಸೋಮವಾರ ಸಂಜೆ ಸುಮಾರು ೩೦ಕ್ಕೂ ಹೆಚ್ಚು ಕುರಿಗಳು ಚಲಿಸುತ್ತಿದ್ದ ರೈಲಿಗೆ ಸಿಲುಕಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ.
ಕುರಿಗಾಹಿಗಳು ಉಂಬ್ಳೆಬೈಲು ರಸ್ತೆಯಲ್ಲಿ ಬರುತ್ತಿದ್ದಾರೆ. ವಾಹನ ದಟ್ಟಣೆ ಹೆಚ್ಚಾದ ಹಿನ್ನಲೆಯಲ್ಲಿ ಕುರಿಗಳು ಏಕಾಏಕಿ ರೈಲ್ವೆ ಹಳಿ ಕಡೆಗೆ ತಿರುಗಿವೆ. ಈ ಸಂದರ್ಭದಲ್ಲಿ ತಾಳಗುಪ್ಪ-ಮೈಸೂರು ರೈಲಿಗೆ ಸಿಲುಕಿಕೊಂಡಿವೆ. ಕೆಲವು ಕುರಿಗಳು ರೈಲಿಗೆ ಸಿಲುಕಿ ಛಿದ್ರ ಛಿದ್ರವಾಗಿವೆ. ಸ್ಥಳದಲ್ಲಿಯೇ ಸುಮಾರು ೩೦ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.
ಕುರಿಗಳು ಹಾವೇರಿ ಸವಣೂರಿನ ವ್ಯಕ್ತಿಯೊಬ್ಬರಿಗೆ ಸೇರಿದ್ದಾಗಿದ್ದು, ಘಟನೆ ನಡೆದ ಕೆಲವೇ ಸಮಯದಲ್ಲಿ ಮೃತ ಕುರಿಗಳನ್ನು ತೆರವುಗೊಳಿಸಲಾಯಿತು.
No comments:
Post a Comment