ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಭದ್ರಾವತಿಯಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೨೨: ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ವೇದಿಕೆ ಪ್ರಮುಖರು ಮಾತನಾಡಿ, ಕೇಂದ್ರ ಸರ್ಕಾರ ಅಸ್ವಾಭಾವಿಕ ಜಿಎಸ್‌ಟಿ ದರ ಜಾರಿಗೆ ತರಲು ಹೊರಟಿದೆ. ಆಹಾರ ಪದಾರ್ಥಗಳ ಮೇಲೂ ತೆರಿಗೆ ವಿಧಿಸಿದೆ. ಬಡವರು ಉಪಯೋಗಿಸುವ ಪ್ಯಾಕ್ ಮಾಡಿದ ಅಕ್ಕಿ, ಹಾಲು, ಮೊಸರು, ಮಜ್ಜಿಗೆ, ಹಪ್ಪಳ, ಉಪ್ಪಿನಕಾಯಿ, ಒಣಕಾಳು, ತರಕಾರಿ, ಮಾಂಸ, ಮೀನು ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ದೇಶದ ಬಡವರ್ಗದ ಪ್ರಜೆಗಳ ಮೆಲೆ ಚಿಂತನೆ ಇಲ್ಲದೆ ಅಸಂಬದ್ಧವಾದ ತೆರಿಗೆ ವಿಧಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ಕಿ ಮೇಲೆ ಜಿಎಸ್‌ಟಿ ಹೇರಿರುವುದು ಬಡವರ ಅನ್ನವನ್ನು ಕಸಿಕೊಂಡಂತಾಗಿದೆ. ಈಗಾಗಲೇ ಕೊರೋನಾದ ಹಿನ್ನಲೆಯಲ್ಲಿ ಯಾವುದೇ ಉದ್ಯೋಗವಿಲ್ಲದೆ ಆರ್ಥಿಕತೆಯಿಂದ ಹಾಗು ನಿರುದ್ಯೋಗದಿಂದ ಹಿಂದುಳಿದಿರುವ ದೇಶದ ಬಡ ವರ್ಗದವರ ಸ್ಥಿತಿ ಹೇಳತೀರದಾಗಿದೆ. ಅತಿವೃಷ್ಟಿ, ಅನಾವೃಷ್ಟಿಗಳಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ತೆರಿಗೆಯನ್ನು ವಿಧಿಸಲಾಗಿದೆ. ತಕ್ಷಣ ಜಿಎಸ್‌ಟಿ ರದ್ದು ಮಾಡಬೇಕೆಂದು ವೇದಿಕೆ ಆಗ್ರಹಿಸುತ್ತದೆ ಎಂದರು.
ವೇದಿಕೆ ತಾಲೂಕು ಅಧ್ಯಕ್ಷ ಜಗದೀಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಮುಖಂಡರಾದ ಫ್ರಾನ್ಸಿಸ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment