ಕರ್ನಾಟಕ ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್ ರಮೇಶ್‌ಕುಮಾರ್ ಅವರು ಮಾಧ್ಯಮದವರ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸಿ ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೩೦ : ಕರ್ನಾಟಕ ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್ ರಮೇಶ್‌ಕುಮಾರ್ ಅವರು ಮಾಧ್ಯಮದವರ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
ತಹಸೀಲ್ದಾರ್ ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ಕೆ.ಆರ್ ರಮೇಶ್‌ಕುಮಾರ್ ಅವರು ಕೋಲಾರದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು, ತಕ್ಷಣ ಪತ್ರಕರ್ತರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಕೆ.ಆರ್ ಶ್ರೀಹರ್ಷ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಹಿರಿಯ ಪತ್ರಕರ್ತರಾದ ಕಟ್ಟಡ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಂಘದ ಮಾಜಿ ಅಧ್ಯಕ್ಷ ಎನ್. ಬಾಬು ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
No comments:
Post a Comment