ವಿವಿಧ ಪೊಲೀಸ್ ಠಾಣೆಗಳಿಗೆ ಲೈವ್‌ಪ್ಯೂರ್ ವಾಟರ್ ಫ್ಯೂರಿಫೈಯರ್ ಅಳವಡಿಕೆ
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಕಿತ್ತೂರು ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ವತಿಯಿಂದ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮದಡಿ ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡಲಾಯಿತು.
ಭದ್ರಾವತಿ, ಜು. ೨೧: ನಗರಸಭೆ ವ್ಯಾಪ್ತಿಯ ಜನ್ನಾಪುರ ಕಿತ್ತೂರು ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ವತಿಯಿಂದ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮದಡಿ ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡಲಾಯಿತು.
ಪ್ರಮುಖ ಮೈಕ್ರೋ ಪೈನಾನ್ಸ್ ಹಣಕಾಸು ಸಂಸ್ಥೆಗಳಲ್ಲಿ ಒಂದಾಗಿರುವ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ವ್ಯವಹಾರದ ಜೊತೆಗೆ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಸಹ ಕೈಗೊಳ್ಳುತ್ತಿದ್ದು, ಸಾಮಾಜಿಕ ಅಭಿವೃರ್ದಧಿ ಕಾರ್ಯಕ್ರಮದಡಿ(ಸಿಎಸ್‌ಆರ್) ನಗರ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ, ಹಳೇನಗರ ಪೊಲೀಸ್ ಠಾಣೆ, ಸಂಚಾರಿ ಠಾಣೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಗಳಿಗೆ ಉಚಿತವಾಗಿ ಲೈವ್‌ಪ್ಯೂರ್ ವಾಟರ್ ಫ್ಯೂರಿಫೈಯರ್ ಅಳವಡಿಸುವ ಮೂಲಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಟ್ಟಿದೆ.
ಪೊಲೀಸ್ ಉಪಾಧೀಕ್ಷಕ, ಐಪಿಎಸ್ ಅಧಿಕಾರಿ ಜಿತೇಂದ್ರಕುಮಾರ್ ದಯಾಮಾ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಸೇವಾ ಕಾರ್ಯವನ್ನು ಪ್ರಶಂಸಿ ಲೈವ್‌ಪ್ಯೂರ್ ವಾಟರ್ ಫ್ಯೂರಿಫೈಯರ್ ಸ್ವೀಕರಿಸಿದರು.
ಲಿಮಿಟೆಡ್ ಕ್ಷೇತ್ರ ವ್ಯವಸ್ಥಾಪಕ ಎಂ.ಎಸ್ ನಟರಾಜ್, ಶಾಖಾ ವ್ಯವಸ್ಥಾಪಕ ಎಂ. ರಂಗಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment