ಕಾಂತರಾಜ್
ಭದ್ರಾವತಿ, ಜು. ೨೦: ನಗರದ ಹೊಸಮನೆ ಶಿವಾಜಿ ಸರ್ಕಲ್ ನಿವಾಸಿ, ಓಂ ಹಿಂದೂ ಕೋಟೆ ಸಂಘಟನೆ ಅಧ್ಯಕ್ಷ ಮಂಜುನಾಥ್‌ರವರ ಸಹೋದರ ಕಾಂತರಾಜ್(೪೫) ಬುಧವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿಯನ್ನು ಹೊಂದಿದ್ದರು. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ. ಮೃತರ ನಿಧನಕ್ಕೆ ಚಂದನ್ ರಾವ್ ಸೇರಿದಂತೆ ಓಂ ಹಿಂದೂ ಕೋಟೆ ಸಂಘಟನೆ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
No comments:
Post a Comment