ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಭದ್ರಾವತಿ ರಂಗಪ್ಪ ವೃತ್ತದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಹತ್ಯೆಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಭದ್ರಾವತಿ, ಜು. ೩೦: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ನಗರದ ರಂಗಪ್ಪ ವೃತ್ತದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಹತ್ಯೆಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ರಾಜ್ಯದಲ್ಲಿ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿನಾಕಾರಣ ಅಮಾಯಕರು ಬಲಿಯಾಗುತ್ತಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ತಕ್ಷಣ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಯಿತು. ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆ ಖಂಡಿಸಿ ಅವರ ಭಾವಚಿತ್ರ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಸಿ.ಎಂ ಖಾದರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಅಭಿಷೇಕ್, ಎನ್‌ಎಸ್‌ಯುಐ ಅಧ್ಯಕ್ಷ ಮುಸ್ವೀರ್ ಬಾಷಾ, ಅಸಂಘಟಿತ ಕಾರ್ಮಿಕರ ನಗರ ಅಧ್ಯಕ್ಷ ಐಸಾಕ್ ಲಿಂಕನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ತಬ್ರೇಜ್ ಖಾನ್, ಅಭಿಷೇಕ್, ರಾಜ್ಯ ವಕ್ತಾರ ಆಮೋಸ್, ಸಾಮಾಜಿಕ ಜಾಲತಾಣದ ಗ್ರಾಮಾಂತರ ಅಧ್ಯಕ್ಷ ಪ್ರವೀಣ್ ನಾಯ್ಕ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ರೂಪ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಜ್ಜದ್, ಹರೀಶ್, ಸೈಯದ್, ನ್ಯಾಯವಾದಿ ಶಿವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment