ಭದ್ರಾವತಿ, ಜು. 25: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಹಳೇನಗರದ ಸಂಚಿಹೊನ್ನಮ್ಮಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ಆಯ್ಕೆಯಾಗಿದ್ದಾರೆ.
ಸಿದ್ದಬಸಪ್ಪ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿದ್ದು, ಅಲ್ಲದೆ 2 ಬಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸಂಘಟನಾ ಚತುರರಾಗಿರುವ ಸಿದ್ದಬಸಪ್ಪ ಇದೀಗ ಕಡಿಮೆ ಅವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಾಧನೆ ಮೆರೆದಿದ್ದಾರೆ.
ಇವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ತಾಲೂಕಿನ ಸಮಸ್ತ ಸರ್ಕಾರಿ ನೌಕರರು, ಶಿಕ್ಷಕ ವೃಂದದವರು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment