ಭದ್ರಾವತಿ, ಜು. ೧: ಮೆಸ್ಕಾಂ ನಗರ ಉಪವಿಭಾಗ ವ್ಯಾಪ್ತಿಯ ಸೀಗೆಬಾಗಿಯ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಳೇನಗರ, ತಾಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಕೋಟೆ ಕಂಚಿಬಾಗಿಲು, ಶ್ರೀ ಹಳದಮ್ಮ ದೇವಸ್ಥಾನ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಸೀಗೆಬಾಗಿ, ಹಳೇಸೀಗೆಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾ ಕಾಲೋನಿ, ಸಿ.ಎನ್ ರಸ್ತೆ, ಎಪಿಎಂಸಿ, ತರೀಕೆರೆ ರಸ್ತೆ, ಗಾಂಧಿ ವೃತ್ತ, ಕೋಡಿಹಳ್ಳಿ, ಮಾರುತಿ ನಗರ, ಸುಣ್ಣದಹಳ್ಳಿ, ಚನ್ನಗಿರಿ ರಸ್ತೆ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ ಘಟಕ, ಹೊಳೆ ಹೊನ್ನೂರು ರಸ್ತೆ, ಖಲಂದರ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡ್ರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment