ಭದ್ರಾವತಿ, ಜು. ೪: ಶಾಲಾ ಚಟುವಟಿಕೆಯ ಪ್ರತಿಯೊಂದರಲ್ಲೂ ವಿಶಿಷ್ಟತೆಯನ್ನು ಕಾಯ್ದುಕೊಂಡು ಬರುತ್ತಿರುವ ನಗರದ ಅಪ್ಪರ್ ಹುತ್ತಾದಲ್ಲಿರುವ ಅನನ್ಯ ಪೂರ್ವ ಪ್ರಾಥಮಿಕ ಹಾಗು ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಸಂಸತ್ತು ಚುನಾವಣೆ ಯಶಸ್ವಿಯಾಗಿ ನಡೆಯಿತು.
ವಿಶೇಷವಾಗಿ ಶಾಲಾ ಸಂಸತ್ತು ಚುನಾವಣೆಯನ್ನು ಮೊಬೈಲ್ ಆಪ್ ಬಳಕೆ ಮಾಡಿ ಡಿಜಿಟಲ್ ವೋಟಿಂಗ್ ಮುಖಾಂತರ ನಡೆಸಲಾಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಪಾಲ್ಗೊಂಡು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಚುನಾವಣೆಯಲ್ಲಿ ಆಯ್ಕೆಯಾದವರು :
ಉಪಾಧ್ಯಕ್ಷರಾಗಿ ಸುರೇಶ್ ಗೌಡ ಹಾಗೂ ಸಿ.ಎನ್ ಶ್ರೇಯ ಹಾಗೂ ಕಾರ್ಯದರ್ಶಿಯಾಗಿ ಜಿ.ಎಸ್ ಪುನೀತ್ ಮತ್ತು ಸಹ ಕಾರ್ಯದರ್ಶಿಯಾಗಿ ಹರ್ಷಿತ್ ಹಾಗೂ ಖಜಾಂಚಿಯಾಗಿ ಪ್ರಿಯಾಂಕ ಆಯ್ಕೆಯಾದರು. ವಿದ್ಯಾಸಂಸ್ಥೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಚುನಾವಣೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಲು ಸಹಕರಿಸಿದರು. ಆಡಳಿತಾಧಿಕಾರಿ ವೇಣುಗೋಪಾಲ್, ಪ್ರಾಂಶುಪಾಲ ಕಲ್ಲೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಾಲಾ ಚಟುವಟಿಕೆಯ ಪ್ರತಿಯೊಂದರಲ್ಲೂ ವಿಶಿಷ್ಟತೆಯನ್ನು ಕಾಯ್ದುಕೊಂಡು ಬರುತ್ತಿರುವ ಭದ್ರಾವತಿ ಅಪ್ಪರ್ ಹುತ್ತಾದಲ್ಲಿರುವ ಅನನ್ಯ ಪೂರ್ವ ಪ್ರಾಥಮಿಕ ಹಾಗು ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಸಂಸತ್ತು ಚುನಾವಣೆ ಯಶಸ್ವಿಯಾಗಿ ನಡೆಯಿತು.
No comments:
Post a Comment